ಬಿಜೆಪಿ ಸ್ಟಾರ್ ಪ್ರಚಾರಕಿ ಮಾಳವಿಕಾ ಅವಿನಾಶ ಅವರು ಭಾನುವಾರ ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಸುರೇಶ ಅಂಗಡಿ ಪರ ನಗರದಲ್ಲಿ ಪ್ರಚಾರ ನಡೆಸಿದರು.
ಇಲ್ಲಿನ ಅಶೋಕ ನಗರದ ಗಣೇಶ ದೇವಸ್ಥಾನದಿಂದ ಸಂಚಾರ ಆರಂಭಿಸಿ ಸಮೀಪದ ಮನೆಗಳಿಗೆ ತೆರಳಿ ಮತ ಯಾಚಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ರಾಜ್ಯದಲ್ಲಿ ಈ ಬಾರಿ ಬಿಜೆಪಿ ಪರ ವಾತಾವರಣವಿದ್ದು, ಹಿಂದಿಗಿಂತಲೂ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲಿದೆ. ದೇಶದಲ್ಲಿ ಮತ್ತೊಮ್ಮೆ ಮೋದಿ ಎನ್ನುವ ಮಾತು ಇದೆ. ಅದೇ ರೀತಿ ಬೆಳಗಾವಿಯಲ್ಲಿ ಮತ್ತೊಮ್ಮೆ ಸುರೇಶ ಅಂಗಡಿ ಎನ್ನುವ ಘೋಷಣೆ ಕೇಳುತ್ತಿದೆ ಎಂದರು.
ಬಿಜೆಪಿ ಅಭ್ಯರ್ಥಿ ಸುರೇಶ ಅಂಗಡಿ ಮಾತನಾಡಿ, ಪ್ರಧಾನಿ ಮೋದಿ ಅವರ ಸಾಧನೆ ಮತ್ತು ಈವರೆಗೆ ಕ್ಷೇತ್ರದಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳ ಆಧಾರದ ಮೇಲೆ ಮತ ಕೇಳುತ್ತಿದ್ದೇನೆ ಎಂದರು. ಬಿಜೆಪಿ ಮಹಿಳಾ ಮೋರ್ಚಾ ನಗರ ಅಧ್ಯಕ್ಷೆ ಸವಿತಾ ಗುಡ್ಡಾಕಾಯ ಇದ್ದರು.
Comments
Post a Comment