Breaking news !! ಎಲ್ಲಾ ಬೂತುಗಳಲ್ಲೂ ಬಿಜೆಪಿ ಯೇ ಲೀಡ್



ಲೋಕಸಭೆ ಚುನಾವಣೆಯ ಸಂದರ್ಭದಲ್ಲಿ ಸಮ್ಮಿಶ್ರ ಸರ್ಕಾರ ಆಡಳಿತ ಯಂತ್ರದ ದುರುಪಯೋಗಪಡಿಸಿಕೊಂಡು ಶಿವಮೊಗ್ಗ ಕ್ಷೇತ್ರದಲ್ಲೇ ಠಿಕಾಣಿ ಹೂಡಿದ್ದರೂ ಕ್ಷೇತ್ರದ ಮತದಾರರು ಸ್ವಾಭಿಮಾನ ಬಿಟ್ಟಿಲ್ಲ ಎಂದು ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ತಿಳಿಸಿದರು.
ಮತದಾನಕ್ಕೆ 48 ಗಂಟೆ ಮುನ್ನ ಹೊರಗಿನಿಂದ ಬಂದವರು ಕ್ಷೇತ್ರ ಬಿಡಬೇಕು ಎಂದು ಚುನಾವಣಾ ಆಯೋಗ ಸೂಚನೆ ನೀಡಿತ್ತು. ಆದರೆ ಬೇರೆ ಕ್ಷೇತ್ರದವರು ಇಲ್ಲಿಯೇ ಕೂತರೂ ಕ್ಷೇತ್ರದ ಮತದಾರರು ಸ್ವಾಭಿಮಾನ ಬಿಟ್ಟು ಕೊಡದೇ ಬಿಜೆಪಿ ಪರ ಮತ ಚಲಾಯಿಸಿದ್ದಾರೆ. ನಮ್ಮ ಕಾರ್ಯಕರ್ತರು ಸವಾಲು ಸ್ವೀಕರಿಸಿ ಸಮರ್ಪಕ ಯೋಜನೆಯೊಂದಿಗೆ ಚುನಾವಣಾ ಪ್ರಚಾರ ನಡೆಸಿದ್ದು, ಶೇ. 100 ಗೆಲ್ಲುವ ವಿಶ್ವಾಸವಿದೆ ಎಂದು ಶನಿವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

Comments