ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಸುಮಲತಾ ಅಂಬರೀಶ್ ಅವರಿಗೆ ಬಿಜೆಪಿ ಅಧಿಕೃತ ಬೆಂಬಲ ಘೋಷಿಸಿದೆ. ಇದರ ಬೆನ್ನಲ್ಲೇ ಲೋಕಸಭಾ ಚುನಾವಣೆಯಲ್ಲಿ ಗೆದ್ದ ಬಳಿಕ ಸುಮಲತಾ ಭಾರತೀಯ ಜನತಾ ಪಕ್ಷಕ್ಕೆ ಸೇರ್ಪಡೆಗೊಳ್ಳಲಿದ್ದಾರೆ ಎಂಬ ಊಹಾಪೋಹಗಳು ರಾಜಕೀಯ ಪಡಸಾಲೆಯಲ್ಲಿ ಕೇಳಿಬರುತ್ತಿವೆ. ಇದೀಗ ಇದಕ್ಕೆ ಪುಷ್ಟಿ ನೀಡುವಂತೆ ಬಿಜೆಪಿಯ ಸಂಸದರೊಬ್ಬರು ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಸುಮಲತಾ ಗೆದ್ದ ಬಳಿಕ ಬಿಜೆಪಿ ಸೇರಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಪಕ್ಷದ ಚುನಾವಣಾ ಕಚೇರಿಯನ್ನು ಗುರುವಾರ ಉದ್ಘಾಟಿಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ವಿಜಯಪುರ ಕ್ಷೇತ್ರದ ಸಂಸದ, ಕೇಂದ್ರ
ಸಚಿವ ರಮೇಶ್ ಜಿಗಜಿಣಗಿ ಸಚಿವನಾಗಿ, ಸಂಸದನಾಗಿ, ಸಾಕಷ್ಟು ಅಭಿವೃದ್ಧಿ ಕಾರ್ಯ ಮಾಡಿದ್ದೇನೆ. ಇದಕ್ಕೆ ಪಕ್ಷದ ಕೊಡುಗೆ ಮತ್ತು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಬೆಂಬಲ ಕಾರಣ ಎಂದರು. ಇದೇ ವೇಳೆ ಸುಮಲತಾ ಅಂಬರೀಷ್ ಚುನಾವಣೆಯಲ್ಲಿ ಗೆದ್ದಾದ ಬಳಿಕ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ಸುಮಲತಾ ಅವರೊಂದಿಗೆ ಈಗಾಗಲೇ ಮಾತುಕತೆ ನಡೆಸಲಾಗಿದೆ
ಎಂದಿದ್ದಾರೆ.ಸುಮಲತಾ ಅವರಿಗೆ ಬಿಜೆಪಿ ಅಧಿಕೃತ ಬೆಂಬಲ ಘೋಷಿಸಿದ ಬಳಿಕ, ಚುನಾವಣೆಯಲ್ಲಿ ಗೆದ್ದರೆ ಬಿಜೆಪಿ ಸೇರುತ್ತಿರಾ ಎಂಬ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸುಮಲತಾ, ಜನರ ಅಭಿಲಾಷೆಯಂತೆ ಜನರಿಗಾಗಿ ನಾನು ಪಕ್ಷೇತರ ಅಭ್ಯರ್ಥಿಯಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದೇನೆ. ಅಂತೆಯೇ ಯಾವ ಪಕ್ಷಕ್ಕೆ ಸೇರಬೇಕು ಎಂಬುದನ್ನೂ ಜನರ ಅಭಿಪ್ರಾಯ ಪಡೆದೇ ನಿರ್ಧರಿಸುತ್ತೇನೆ ಎಂದು ಸ್ಪಷ್ಟಪಡಿಸಿದ್ದಾರೆ

Comments
Post a Comment