ಪ್ರಧಾನಿ ಮೋದಿ ನಾಯಕತ್ವದ ಬಗ್ಗೆ ದೇಶದ ಜನರಲ್ಲಿ ವಿಶ್ವಾಸ ಹೆಚ್ಚಾಗಿದ್ದು, ಬಿಜೆಪಿ 282 ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಭರ್ಜರಿ ಜಯ ಗಳಿಸಲಿದೆ ಎಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೇಳಿದ್ದಾರೆ.
ಕಳೆದ ಲೋಕಸಭೆ ಚುನಾವಣೆಗಿಂತ ಈ ಚುನಾವಣೆಯಲ್ಲಿ ಎನ್.ಡಿ.ಎ. ಹೆಚ್ಚು ಸ್ಥಾನಗಳನ್ನು ಗೆಲ್ಲಲಿದೆ. ಸಮೀಕ್ಷೆ ಪ್ರಕಾರ, ಬಿಜೆಪಿ 282 ಹೆಚ್ಚು ಕ್ಷೇತ್ರಗಳಲ್ಲಿ ಭಾರಿ ಅಂತರದ ಗೆಲುವು ಸಾಧಿಸಲಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಮೋದಿ ನೇತೃತ್ವದ ಸರ್ಕಾರದ ಅವಧಿಯಲ್ಲಿ ಕೈಗೊಂಡ ಕಾರ್ಯಕ್ರಮಗಳು ಗೆಲುವಿಗೆ ಪೂರಕವಾಗಿವೆ. ಅದೇ ರೀತಿ, ಸರ್ಜಿಕಲ್ ಸ್ಟ್ರೈಕ್, ಬಾಲಾಕೋಟ್ ಏರ್ ಸ್ಟ್ರೈಕ್, ರಾಷ್ಟ್ರೀಯ ಭದ್ರತೆ ಮೊದಲಾದ ವಿಷಯಗಳು ಬಿಜೆಪಿ ಗೆಲುವಿಗೆ ಪೂರಕವಾಗುತ್ತದೆ ಎಂದು ಸಂದರ್ಶನವೊಂದರಲ್ಲಿ ಅಮಿತ್ ಶಾ ಹೇಳಿದ್ದಾರೆ.
Comments
Post a Comment