ಕೆಲ ದಿನಗಳಿಂದ ಕ್ಷೇತ್ರದಲ್ಲಿ ಕಾಣಿಸಿಕೊಳ್ಳದ ವಿಜಯನಗರ ಶಾಸಕ ಆನಂದ್ ಸಿಂಗ್ ಶನಿವಾರ ದಿಢೀರನೆ ನಗರದಲ್ಲಿ ಕಾಣಿಸಿಕೊಂಡರು. ಬಳಿಕ ಪಟ್ಟಣ ಠಾಣೆಗೆ ಹೋಗಿ ಪೊಲೀಸ್ ಅಧಿಕಾರಿಗಳನ್ನು ಭೇಟಿ ಮಾಡಿದರು.
'ನಾನು ಕಾಣೆಯಾಗಿದ್ದೇನೆ ಎಂದು ಕೆಲವರು ಇತ್ತೀಚೆಗೆ ಠಾಣೆಗೆ ದೂರು ನೀಡಿದ್ದರು. ಈ ವಿಷಯ ಮಾಧ್ಯಮಗಳಲ್ಲಿ ಓದಿ ಗಮನಿಸಿದ್ದೇನೆ. ನಾನೆಲ್ಲಿಯೂ ಹೋಗಿಲ್ಲ. ನಮ್ಮ ತಂದೆ ಪೃಥ್ವಿರಾಜ್ ಸಿಂಗ್ ಅನಾರೋಗ್ಯದಿಂದ ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಚಿಕಿತ್ಸೆ ಕೊಡಿಸಿ ಮರಳಿದ್ದೇನೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದ ಎಲ್ಲ ದಾಖಲೆಗಳನ್ನು ಪೊಲೀಸ್ ಅಧಿಕಾರಿಗೆ ಕೊಟ್ಟಿದ್ದೇನೆ' ಎಂದು ಸಿಂಗ್ ಸಮಜಾಯಿಷಿ ನೀಡಿದ್ದಾರೆ.
Comments
Post a Comment