ಪ್ರಧಾನಿ ೋದಿ ಇಸ್ರೋಗೆ ಕಾಲಿಟ್ಟಿದ್ದೆ ವಿಜ್ಞಾನಿಗಳ ಪಾಲಿಗೆ ಅಪಶಕುನವಾಯಿತು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.
ಈ ಮೂಲಕ ಪ್ರಧಾನಿ ಮೋದಿ ಅವರನ್ನು ಟೀಕಿಸುವ ಭರದಲ್ಲಿ ವಿವಾದಿತ ಹೇಳಿಕೆ ನೀಡಿದ್ದಾರೆ. ಚಂದ್ರಯಾನ-2 ಯೋಜನೆಯ ವಿಕ್ರಂ ಲ್ಯಾಂಡರ್ ಚಂದ್ರನ ಮೇಲೆ ಇಳಿಯುವುದನ್ನು ನೋಡಲು ಪ್ರಧಾನಿ ಮೋದಿ ಬೆಂಗಳೂರಿನ ಭಾರತೀಯ ಬಾಹ್ಯಾಕಾಶ ಸಂಸ್ಥೆ(ಇಸ್ರೋ) ಕೇಂದ್ರಕ್ಕೆ ಭೇಟಿ ನೀಡಿದ್ದರು.
ಚಂದ್ರನನ್ನು ಮುಟ್ಟುವ ಕೊನೆಯ ಹಂತದಲ್ಲಿ ಲ್ಯಾಂಡರ್ ಸಂಪರ್ಕ ಕಳೆದುಕೊಂಡಿದ್ದು, ಪ್ರಧಾನಿ ಮೋದಿ ವಿಜ್ಞಾನಿಗಳ ಕಾರ್ಯವನ್ನು ಶ್ಲಾಘಿಸಿ ಪ್ರಯತ್ನ ಮುಂದುವರಿಸಲು ಧೈರ್ಯ ತುಂಬಿದ್ದಾರೆ. ಈ ಕುರಿತಾಗಿ ಮಾತನಾಡಿದ ಮಾಜಿ ಸಿಎಂ ಕುಮಾರಸ್ವಾಮಿ, ಪ್ರಧಾನಿ ಇಸ್ರೋ ಕೇಂದ್ರಕ್ಕೆ ಕಾಲಿಟ್ಟಿದ್ದರಿಂದ ವಿಜ್ಞಾನಿಗಳ ಪಾಲಿಗೆ ಅಪಶಕುನವಾಗಿದೆ ಎಂದು ಹೇಳಿದ್ದಾರೆ.
Comments
Post a Comment