ಉಪಚುನಾವಣೆ !! ಕಾಂಗ್ರೆಸ್ ಅಭ್ಯರ್ಥಿಗಳ ಫೈನಲ್ ಪಟ್ಟಿ ಹೊರ ಹಾಕಿದ ಸಿದ್ದರಾಮಯ್ಯ, 10 ಜನ ಯುವಕರಿಗೆ ಅವಕಾಶ ಕೊಟ್ಟ ಸಿದ್ದರಾಮಯ್ಯ
ಕರ್ನಾಟಕದ 8 ಕ್ಷೇತ್ರಗಳ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಒಟ್ಟು 15 ಕ್ಷೇತ್ರಗಳಿಗೆ ಡಿಸೆಂಬರ್ 5ರಂದು ಮತದಾನ ನಡೆಯಲಿದೆ.
ಗುರುವಾರ ಎಐಸಿಸಿ ಒಟ್ಟು 8 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಿ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಶಾಸಕ ಸ್ಥಾನದಿಂದ ಅನರ್ಹಗೊಂಡಿರುವ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಸಲು ಚುನಾವಣಾ ಆಯೋಗ ವೇಳಾಪಟ್ಟಿ ಪ್ರಕಟಿಸಿದೆ.
Image result for karnataka election
ಯಲ್ಲಾಪುರ, ಹಿರೇಕೆರೂರು, ರಾಣೆಬೆನ್ನೂರು, ಚಿಕ್ಕಬಳ್ಳಾಪುರ, ಕೆ. ಆರ್. ಪುರ, ಮಹಾಲಕ್ಷ್ಮೀ ಲೇಔಟ್, ಹೊಸಕೋಟೆ ಮತ್ತು ಹುಣಸೂರು ಕ್ಷೇತ್ರಕ್ಕೆ ಅಭ್ಯರ್ಥಿಗಳನ್ನು ಕಾಂಗ್ರೆಸ್ ಅಂತಿಮಗೊಳಿಸಿದೆ.
* ಚಿಕ್ಕಬಳ್ಳಾಪುರ – ಎಂ. ಅಂಜನಪ್ಪ * ಕೆ. ಆರ್. ಪುರ – ಎಂ. ನಾರಾಯಣ ಸ್ವಾಮಿ * ಮಹಾಲಕ್ಷ್ಮೀ ಲೇಔಟ್ – ಎಂ. ಶಿವರಾಜ್ * ಹೊಸಕೋಟೆ – ಪದ್ಮಾವತಿ ಸುರೇಶ್ * ಹುಣಸೂರು – ಎಚ್. ಪಿ. ಮಂಜುನಾಥ್
ವಿಧಾನಸಭೆ ಉಪ ಚುನಾವಣೆ ಜೊತೆಗೆ ಎರಡು ವಿಧಾನ ಪರಿಷತ್ ಕ್ಷೇತ್ರಗಳ ಚುನಾವಣೆಗೂ ಅಭ್ಯರ್ಥಿ ಘೋಷಣೆ ಮಾಡಲಾಗಿದೆ. * ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಡಾ. ಆರ್. ಎಂ. ಕುಬೇರಪ್ಪ * ಆಗ್ನೇಯ ಶಿಕ್ಷಕರ ಕ್ಷೇತ್ರಕ್ಕೆ ಶರಣಪ್ಪ ಮಟ್ಟೂರು ಅಭ್ಯರ್ಥಿಗಳು ಅನರ್ಹಗೊಂಡ ಶಾಸಕರು ಸ್ಪೀಕರ್ ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿಯ ವಿಚಾರಣೆಯನ್ನು ನ್ಯಾಯಾಲಯ ಅಂತಿಮಗೊಳಿಸಿದ್ದು, ತೀರ್ಪಪು ಕಾಯ್ದಿರಿಸಿದೆ.
Image result for rebel mla
ಯಶವಂತಪುರ, ಶಿವಾಜಿನಗರ, ಕೆ. ಆರ್. ಪೇಟೆ, ಗೋಕಾಕ್, ಅಥಣಿ, ಕಾಗವಾಡ, ವಿಜಯನಗರ ವಿಧಾನಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಣೆ ಮಾಡಬೇಕಿದೆ.
Comments
Post a Comment