ಉಪಚುನಾವಣೆಯಲ್ಲಿ ಕಾಂಗ್ರೆಸ್ 14 ಕ್ಷೇತ್ರದಲ್ಲಿ ಭರ್ಜರಿ ಗೆಲುವು !! ಭವಿಷ್ಯ ನುಡಿದ ಕೊಡಿಮಠ ಸ್ವಾಮೀಜಿ


ವಿಧಾನ ಸಭೆ ಉಪಚುನಾವಣೆಯಲ್ಲಿ 12 ಸ್ಥಾನಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ. ಡಿ.9ರ ನಂತರ ಬಿಜೆಪಿ ಸರ್ಕಾರ ಪತನವಾಗಿ ಕಾಂಗ್ರೆಸ್ ಮತ್ತು ಜೆಡಿಎಸ್ ಮೈತ್ರಿ ಸರ್ಕಾರ ರಚನೆಯಾಗಲಿದೆ. ಇದಕ್ಕೆ ಮಹಾರಾಷ್ಟ್ರದಲ್ಲಿನ ಮೇತ್ರಿ ಸರ್ಕಾರವೇ ಪ್ರೇರಣೆಯಾಗಲಿದೆ ಎಂದು ಕೆಪಿಸಿಸಿ ಕಾರ್ಯದರ್ಶಿ ಎಂ.ಎನ್. ಪಾಟೀಲ ಹೇಳಿದರು.

ಬಿಜೆಪಿ ಎರಡು ಪಕ್ಷದ ಶಾಸಕರನ್ನು ಗೊಂದಲದಲ್ಲಿ ಸಿಲುಕಿಸಿ ಅವರನ್ನು ಅನಾಥರನ್ನಾಗಿ ಮಾಡಿ, 15 ಸ್ಥಾನಗಳಿಗೆ ಉಪಚುನಾವಣೆ ನಡೆಯುವಂತೆ ಮಾಡಿದ್ದಾರೆ. ಇದು ಪ್ರಜಾಪ್ರಭುತ್ವದ ವಿರೋಧಿಯಾಗಿದೆ. ಉಪಚುನಾವಣೆಯಲ್ಲಿ ಅವರಿಗೆ ಸೋಲು ಖಚಿತ. ಈಗಾಗಲೇ ಆಯಾ ಮತಕ್ಷೇತ್ರದ ಮತದಾರರು ತಿರ್ಮಾನ ಮಾಡಿದ್ದಾರೆ. ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ 12 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕಾಂಗ್ರೆಸ್ ಮುಖಂಡರಲ್ಲಿ ಯಾವುದೇ ಭಿನಾಪ್ರಾಯವಿಲ್ಲ. ಇದೆಲ್ಲ ಬಿಜೆಪಿಯವರ ಕುತಂತ್ರ ಹಾಗೂ ಗಾಳಿ ಸುದ್ದಿ. ಡಿ.9ರ ನಂತರ ರಾಜ್ಯದಲ್ಲಿ ಬದಲಾವಣೆಯ ಗಾಳಿ ಬೀಸಲಿದೆ. ಅದರಲ್ಲಿ ಯಾವುದೇ ಅನುಮಾನವಿಲ್ಲ. ಮತದಾರರು ಆಪರೇಷನ್ ಕಮಲದ ವಿರುದ್ಧವಾಗಿ ಮತ ನೀಡಲಿದ್ದಾರೆ ಎಂದರು.

Comments