ಇದೀಗ ಬಂದ ಸುದ್ದಿ !! ಬಲಿಷ್ಠ ಹಿರಿಯ ನಾಯಕನಿಂದ ಸಮೀಕ್ಷೆ ಬಹಿರಂಗ 15 ಕ್ಷೇತ್ರಗಳ ಪೈಕಿ 12 ರಲ್ಲಿ ಜೆಡಿಎಸ್ ಗೆ ಭರ್ಜರಿ ಜಯ


ಉಪ ಚುನಾವಣೆ ಹಿನ್ನೆಲೆಯಲ್ಲಿ ಹದಿನೈದು ಕ್ಷೇತ್ರದ ಉಸ್ತುವಾರಿಗಳ ಸಭೆ ನಡೆದಿದ್ದು, ಎಲ್ಲಾ ಕ್ಷೇತ್ರಗಳಲ್ಲೂ ಪಕ್ಷ ಗೆಲ್ಲುವ ಸ್ಥಿತಿಯಲ್ಲಿದೆ ಎಂಬ ವರದಿ ಇದೆ ಎಂದು ರಾಜ್ಯ ಜೆಡಿಎಸ್ಿ ಪ್ರಧಾನ ಕಾರ್ಯದರ್ಶಿ ಹಾಗೂ ಉಪಚುನಾವಣೆಯ ಉಸ್ತುವಾರಿ ಹೇಳಿದ್ದಾರೆ.

ಬುಧವಾರ ಉಸ್ತುವಾರಿಗಳ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರ ನೇತೃತ್ವದಲ್ಲಿ ಹದಿನೈದು ಕ್ಷೇತ್ರಗಳ ಉಸ್ತುವಾರಿಗಳ ಸಭೆ ನಡೆಯಿತು. ಸಭೆಯಲ್ಲಿ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಗಳ ಸ್ಥಿತಿ ಬಗ್ಗೆ ವರದಿಯನ್ನು ನೀಡಲಾಗಿದ್ದು, ವಿಶ್ಲೇಷಣೆ ನಡೆದಿದೆ. ಎಲ್ಲಾ ಕ್ಷೇತ್ರಗಳಲ್ಲೂ ಜೆಡಿಎಸ್ಿ ಅಭ್ಯರ್ಥಿಗಳು ಗೆಲುವು ಸಾಧಿಸುವ ಸ್ಥಿತಿಯಲ್ಲಿದ್ದಾರೆ ಎಂಬ ವರದಿ ಇದೆ ಎಂದರು.

Comments