ಗೋಕಾಕ್ ನಲ್ಲಿ ಕಾಂಗ್ರೆಸ್ ಗೆ ಮತ್ತೊಂದು ಶಾಕ್ ಉಂಟಾಗಿದೆ. ಉಪಚುನಾವಣೆಗೆ ಕೆಲವೇ ದಿನಗಳು ಬಾಕಿ ಇರುವಾಗಲೇ ಗೋಕಾಕ್ ತಾಲೂಕು ಪಂಚಾಯಿತ್ ನ ಹದಿನೈದಕ್ಕೂ ಹೆಚ್ಚು ಸದಸ್ಯರು ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ.
ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಅವರ ಸೂಚನೆಯ ಮೇರೆಗೆ ತಾಲೂಕು ಪಂಚಾಯಿತಿಯ ಸದಸ್ಯರು ರಾಜೀನಾಮೆ ನೀಡಿದ್ದಾರೆ ಎನ್ನಲಾಗಿದೆ. ಮೂಲಗಳ ಪ್ರಕಾರ ಗೋಕಾಕ್ ತಾಲೂಕು ಪಂಚಾಯಿತಿ 23ಕ್ಕೂ ಹೆಚ್ಚು ಸದಸ್ಯರು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂದು ಹೇಳಲಾಗಿದೆ.
Image result for satish jarkiholi and ramesh jarkiholi
ಉಪಚುನಾವಣೆ ಸಮೀಪವಿರುವಾಗಲೇ ತಾಲೂಕು ಪಂಚಾಯಿತಿಯ ಸದಸ್ಯರು ಕಾಂಗ್ರೆಸ್ ಗೆ ರಾಜೀನಾಮೆ ನೀಡಿರುವುದು ಗೋಕಾಕ್ ನಲ್ಲಿ ಪಕ್ಷಕ್ಕೆ ದೊಡ್ಡ ಹೊಡೆತ ಎಂದೇ ಹೇಳಲಾಗುತ್ತಿದೆ. ಬೈಎಲೆಕ್ಷನ್ ಹೊಸ್ತಿಲಲ್ಲೇ ಗೋಕಾಕ್ ಕ್ಷೇತ್ರದಲ್ಲಿ ರಮೇಶ್ ಜಾರಕಿಹೊಳಿ ತಮ್ಮ ಹಿಡಿತ ಬಿಗಿಗೊಳಿಸಿದ್ದು, ರಾಜಕೀಯ ವಿದ್ಯಮಾನಗಳು ಕುತೂಹಲ ಕೆರಳಿಸಿವೆ.
Comments
Post a Comment