ಸಿಎಂ ಯಡಿಯೂರಪ್ಪ ಅವರಿಗೆ ಭಯ ಹುಟ್ಟಿಸಿದ ಕಾಂಗ್ರೆಸ್ ಪಕ್ಷದ 20 ವರ್ಷದ ಮರಿ ಸಿದ್ದು



ಸಿಎಂ ಯಡಿಯೂರಪ್ಪ ಅವರಿಗೆ ಭಯ ಹುಟ್ಟಿಸಿದ ಕಾಂಗ್ರೆಸ್ ಪಕ್ಷದ 20 ವರ್ಷದ ಮರಿ ಸಿದ್ದು
ಡಿಸೆಂಬರ್ ಒಳಗಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ಸ್ವಯಂ ಪ್ರೇರಿತರಾಗಿ ರಾಜೀನಾಮೆ ನೀಡುವಂತೆ ಬಿ.ಎಸ್.ಯಡಿಯೂರಪ್ಪ ಅವರಿಗೆ ಸೂಚಿಸಿದೆ ಎಂದು ಗುರ್ಮಿತ್ಕಲ್ ಕ್ಷೇತ್ರದ ಜೆಡಿಎಸ್ ಶಾಸಕ ನಾಗನಗೌಡ ಪಾಟೀಲ ಅವರು ಹೇಳಿದ್ದಾರೆ.



ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ನನ್ನೊಂದಿಗೆ ನವದೆಹಲಿಯಲ್ಲಿರುವ ಬಿಜೆಪಿಯ ಕೆಲ ಹಿರಿಯ ನಾಯಕರು ಸಂಪರ್ಕದಲ್ಲಿದ್ದು, ಅವರು ನೀಡಿರುವ ಮಾಹಿತಿಗಳ ಪ್ರಕಾರ ಡಿಸೆಂಬರ್ ಒಳಗಾಗಿ ಸ್ವಯಂಪ್ರೇರಿತರಾಗಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಯಡಿಯೂರಪ್ಪ ಅವರಿಗೆ ಬಿಜೆಪಿ ಕಮಾಂಡ್ ಸೂಚಿಸಿದೆ ಎಂದು ತಿಳಿಸಿದ್ದಾರೆಂದು ಹೇಳಿದ್ದಾರೆ.

ಎಲ್.ಕೆ.ಅಡ್ವಾಣಿ ಮತ್ತು ಮುರಳಿ ಮನೋಹರ್ ಲಾಲ್ ಜೋಷಿಯಂತಹ ಹಿರಿಯ ನಾಯಕರಿದ್ದು ಅವರನ್ನು ಹೊರತುಪಡಿಸಿ ನಿಮಗೆ ವಿನಾಯಿತಿ ನೀಡುವುದು ಕಷ್ಟಕರವಾಗಲಿದ್ದು, ಹೀಗಾಗಿ ಸಿಎಂ ಸ್ಥಾನವನ್ನು ಡಿಸೆಂಬರ್ ಒಳಗಾಗಿ ಸ್ವಯಂಪ್ರೇರಿತರಾಗಿ ತೊರೆಯುವಂತೆ ಸೂಚಿಸಿದೆ ಎಂದು ತಿಳಿಸಿದ್ದಾರೆ.



ಯಡಿಯೂರಪ್ಪ ಅವರು ಸ್ವಯಂಪ್ರೇರಿತರಾಗಿ ಸಿಎಂ ಸ್ಥಾನವನ್ನು ತೊರೆದಿದ್ದೇ ಆದರೆ, ಅವರ ಪುತ್ರ ವಿಜಯೇಂದ್ರ ಅವರಿಗೆ ಕೇಂದ್ರದಲ್ಲಿ ಸಚಿವ ಸ್ಥಾನ ನೀಡುವುದಾಗಿಯೂ ಬಿಜೆಪಿ ಹೈಕಮಾಂಡ್ ಯಡಿಯೂರಪ್ಪ ಅವರಿಗೆ ಆಫರ್ ನೀಡಿದೆ ಎಂದಿದ್ದಾರೆ.

ಒಂದು ವೇಳೆ ಯಡಿಯೂರಪ್ಪ ಅವರನ್ನು ಬಲವಂತದಿಂದ ಹೈಕಮಾಂಡ್ ಸಿಎಂ ಸ್ಥಾನದಿಂದ ತೆಗೆದಿದ್ದೇ ಆದರೆ, ಯಡಿಯೂರಪ್ಪ ಅವರು ನೂತನ ಪಕ್ಷ ರಚನೆ ಮಾಡುವ ಸಾಧ್ಯತೆಗಳಿದ್ದು, ಇದು ಬಿಜೆಪಿಗೆ ದೊಡ್ಡ ಹೊಡೆತವನ್ನು ನೀಡಲಿದೆ. ಲಿಂಗಾಯತ ಸಮುದಾಯವರು ಬಿಜೆಪಿಗೆ ಸವಾಲಾಗಿ ಪರಿಣಮಿಸಲಿದ್ದಾರೆ. ಹೀಗಾಗಿ ಯಡಿಯೂರಪ್ಪ ಅವರನ್ನೇ ತಣ್ಣಗೆ ಮಾಡಲು ಬಿಜೆಪಿ ಹೈಕಮಾಂಡ್ ಯತ್ನ ನಡೆಸುತ್ತಿದೆ ಎಂದು ಪಾಟೀಲ್ ಹೇಳಿದ್ದಾರೆ.

ಡಿಸೆಂಬರ್ ತಿಂಗಳ ನಂತರ ಸಿಎಂ ಬಿ.ಎಸ್. ಯಡಿಯೂರಪ್ಪ ಹುದ್ದೆ ಖಾಲಿಯಾಗಲಿದೆ ಎಂದು ಗುರುಮಠಕಲ್ ಕ್ಷೇತ್ರದ ಜೆಡಿಎಸ್ ಶಾಸಕ ನಾಗನಗೌಡ ಕಂದಕೂರ ಅವರು ಹೇಳಿದ್ದಾರೆ.

ಬುಧವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಡಿಯೂರಪ್ಪನವರಿಗೆ ಭಾರತೀಯ ಜನತಾ ಪಕ್ಷದಲ್ಲಿ ಪಕ್ಷದಲ್ಲಿ ಕ್ಷೇಮ ವಿಲ್ಲ. ಯಡಿಯೂರಪ್ಪನವರಿಗೆ ಹೈಕಮಾಂಡ್ ಎರಡು ತಿಂಗಳು ಗ್ರೇಸ್ ಪಿರೇಡ್ ಕೊಟ್ಟಿದ್ದಾರೆ. ಬಿಜೆಪಿ ಹೈ ಕಮಾಂಡ ಯಡಿಯೂರಪ್ಪನವರನ್ನ ಕೆಳಗಿಳಿಯುವಂತೆ ಸೂಚಿಸಿದೆ ಎಂದು ತಿಳಿಸಿದ್ದಾರೆ.

ನಿಮ್ಮನ್ನು ಗೌರವಯುತವಾಗಿ ನಿಮ್ಮನ್ನ ಕೇರಳದ ರಾಜ್ಯಪಾಲರನ್ನಾಗಿಸುತ್ತೇವೆ ಎಂದು ಯಡಿಯೂರಪ್ಪನವರಿಗೆ ಹೈಕಮಾಂಡ್ ತಿಳಿಸಿದೆ.  ಬಿಎಸ್ ವೈ ಅವರ ಪುತ್ರ ವಿಜಯೇಂದ್ರರನ್ನ ಎಮ್ ಎಲ್ ಸಿ ಮಾಡಿ ಮಂತ್ರಿ ಸ್ಥಾನ ನೀಡಲಿದ್ದಾರೆ ಎಂದು ಹೇಳಿದ್ದಾರೆ.


Comments