ಗೋಕಾಕ್ ನಲ್ಲಿ 23 ತಾಲೂಕು ಪಂಚಾಯತಿ ಸದಸ್ಯರು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡುವ ಮೂಲಕ ಶಾಕ್ ನೀಡಿದ್ದಾರೆ.
ಈ ಮೊದಲು ಕಾಂಗ್ರೆಸ್ ಪಕ್ಷದ ತಾಲೂಕು ಪಂಚಾಯತಿ ಸದಸ್ಯರು ಪಕ್ಷಕ್ಕೆ ರಾಜೀನಾಮೆಗೆ ನಿರ್ಧರಿಸಿದ್ದು, ಪಕ್ಷೇತರರು ಸೇರಿದಂತೆ 15ಕ್ಕೂ ಅಧಿಕ ಸದಸ್ಯರು ರಾಜೀನಾಮೆ ನೀಡಲಿರುವುದಾಗಿ ತಿಳಿದುಬಂದಿತ್ತು. ಆದರೆ ಈಗ 42 ಸದಸ್ಯ ಬಲದ ಗೋಕಾಕ್ ತಾಲೂಕು ಪಂಚಾಯತ್ ನಲ್ಲಿ 23 ಸದಸ್ಯರು ಪಕ್ಷದ ಪ್ರಾಥಮಿಕ ಸದಸ್ಯತ್ವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
Taluk Panchayat 23 Members Resigned In Gokak
ಗೋಕಾಕ್ ಇಓಗೆ ಈ ಸದಸ್ಯರೆಲ್ಲರೂ ರಾಜೀನಾಮೆ ಸಲ್ಲಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಏಕಪಕ್ಷೀಯ ನಿರ್ಧಾರಕ್ಕೆ ಬೇಸತ್ತು ರಾಜೀನಾಮೆ ನೀಡಿರುವುದಾಗಿಯೂ ತಿಳಿಸಿದ್ದಾರೆ. ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ನಿರ್ದೇಶನದ ಮೇರೆಗೆ ರಾಜೀನಾಮೆ ಸಲ್ಲಿಸಿದ್ದಾಗಿ ತಿಳಿದುಬಂದಿತ್ತು. ಆದರೆ ಸದಸ್ಯರ ರಾಜೀನಾಮೆ ಕುರಿತು ಯಾವುದೇ ಮಾಹಿತಿ ಇಲ್ಲ ಎಂದು ರಮೇಶ್ ಜಾರಕಿಹೊಳಿ ಹೇಳಿಕೆ ನೀಡಿದ್ದಾರೆ
Comments
Post a Comment