ವಿಜಯಪುರ: ಅನೇಕ ಭಾಗ್ಯಗಳ ಮೂಲಕ ಜನಪರ ಆಡಳಿತ ನೀಡಿದವರು ಮಾಜಿ ಸಿಎಂ ಸಿದ್ದರಾಮಯ್ಯನವರು. ಬರುವ ದಿನಗಳಲ್ಲಿ ಮತ್ತೆ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಕಾಂಗ್ರೆಸ್ ನೂತನ ಜಿಲ್ಲಾಧ್ಯಕ್ಷ ಪ್ರೊ.ರಾಜು ಆಲಗೂರ ಭವಿಷ್ಯ ನುಡಿದರು.
ನಗರದ ದರಬಾರ ಪ್ರೌಢ ಶಾಲೆ ಮೈದಾನದಲ್ಲಿ ಕಾಂಗ್ರೆಸ್ ಜಿಲ್ಲಾ ಘಟಕದಿಂದ ಮಂಗಳವಾರ ಆಯೋಜಿಸಿದ್ದ ಕೇಂದ್ರ ಆರ್ಥಿಕ ನೀತಿ ವಿರುದ್ಧದ ಜನಾಂದೋಲನ ಸಭೆಯಲ್ಲಿ ನೂತನ ಜಿಲ್ಲಾಧ್ಯಕ್ಷರಾಗಿ ಪದಗ್ರಹಣ ಮಾಡಿ ಅವರು ಮಾತನಾಡಿದರು.
ರಾಷ್ಟ್ರಕ್ಕೆ ಸ್ವಾತಂತ್ರ್ಯ ನೀಡಬೇಕೆಂಬ ಉದ್ದೇಶದಿಂದ ಅಸ್ತಿತ್ವಕ್ಕೆ ಬಂದಿದ್ದು ಕಾಂಗ್ರೆಸ್. ಆದರೆ ಬಿಜೆಪಿ ಜಾತಿ-ಧರ್ಮ ಒಡೆದು ಆಳುವ ಕಾರ್ಯದಲ್ಲಿ ತೊಡಗಿದೆ. ಇಂತ ಜಾತಿವಾದಿಗಳನ್ನು ದೂರವಿಟ್ಟು ಜಾತ್ಯತೀತ ಸಮಾಜ ನಿರ್ಮಾಣ ಮಾಡುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದರು.
ಈ ಹಿಂದಿನ ಸಿದ್ದರಾಮಯ್ಯ ಸರ್ಕಾರ ದೇವರಾಜ ಅರಸು ಅವರನ್ನೂ ಮೀರಿಸುವ ಮಟ್ಟಿಗೆ ಜನಪರ ಕಾರ್ಯಕ್ರಮಗಳನ್ನು ನೀಡಿದೆ. ಮುಂಬರುವ ದಿನಗಳಲ್ಲಿ ಮತ್ತೆ ಅವರ ನೇತೃತ್ವದಲ್ಲಿ ಸರ್ಕಾರ ಅಧಿಕಾರಕ್ಕೆ ಬರಲಿದೆ. ಅದಕ್ಕಾಗಿ ಎಲ್ಲರೂ ಒಟ್ಟಾಗಿ ಶ್ರಮಿಸೋಣ ಎಂದರು.
ಮಾಜಿ ಸಚಿವ ಎಂ.ಬಿ. ಪಾಟೀಲ ಮಾತನಾಡಿ, ಪುಲ್ವಾಮಾ, ಬಾಲಾಕೋಟ್ ದಾಳಿ ಮುಂದಿಟ್ಟುಕೊಂಡು ಬಿಜೆಪಿ ಚುನಾವಣೆ ಗೆದ್ದಿದೆ. ಧಾರ್ಮಿಕ ಭಾವನೆ ಬಿತ್ತಿ ಬಿಜೆಪಿ ಚುನಾವಣೆ ಗೆಲ್ಲುತ್ತಿದೆ. ಸ್ವಲ್ಪ ದಿನದಲ್ಲೇ ಬಿಜೆಪಿ ಬಂಡವಾಳ ಬಯಲಾಗಲಿದೆ. ಬಡವರು, ರೈತರು, ಎಲ್ಲ ವರ್ಗದ ಪರ ಇರುವ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬರಬೇಕಿದೆ. ಆರು ಅಥವಾ ಎಂಟು ತಿಂಗಳಲ್ಲಿ ಸಾರ್ವತ್ರಿಕ ಚುನಾವಣೆ ಬರಲಿದ್ದು ಎಲ್ಲರೂ ಒಟ್ಟಾಗಿ ಶ್ರಮಿಸಬೇಕಿದೆ ಎಂದರು.
ಶಾಸಕ ಯಶವಂತರಾಯಗೌಡ ಪಾಟೀಲ ಮಾತನಾಡಿ, ಸರ್ವಾಧಿಕಾರಿ ಪ್ರಧಾನಿ ಮೋದಿ ದೇಶದಲ್ಲಿ ಅಘೋಷಿತ ತುರ್ತು ಪರಿಸ್ಥಿತಿ ತಂದಿದ್ದಾರೆ. ಇದನ್ನು ಮೋದಿ ಗುರು ಅಡ್ವಾಣಿ ಅವರೇ ಹೇಳಿದ್ದಾರೆ. ಸಂವಿಧಾನದ ಮೂಲ ಸ್ವರೂಪ ಬದಲಿಸುವ ಕೆಲಸ ಬಿಜೆಪಿ ಮಾಡುತ್ತಿದೆ. ಅಂಥ ಸರ್ಕಾರ ಕಿತ್ತೊಗೆಯುವುದು ನಾಗರಿಕ ಸಮಾಜದ ಕರ್ತವ್ಯ ಎಂದರು.
ಶಾಸಕ ಶಿವಾನಂದ ಪಾಟೀಲ ಮಾತನಾಡಿ, ಮೋದಿ ಸರ್ಕಾರದ ಮೇಲೆ ಜನ ವಿಶ್ವಾಸ ಕಳೆದುಕೊಳ್ಳುತ್ತಿದ್ದಾರೆ. ಕಳೆದ ಚುನಾವಣೆಯಲ್ಲಿ ಇನ್ನೂ ಸ್ವಲ್ಪ ಪ್ರಯತ್ನಿಸಿದ್ದರೆ ಮೋದಿ ರಾಜ್ಯದಲ್ಲೇ ಕಾಂಗ್ರೆಸ್ ಗೆಲುವು ಸಾಧಿಸುತ್ತಿತ್ತು. ಸಮರ್ಥ ನಾಯಕತ್ವದ ಕೊರತೆ ಕಾಡಿತೆಂದು ವಿಷಾದ ವ್ಯಕ್ತಪಡಿಸಿದರು.
ಎಸ್.ಆರ್. ಪಾಟೀಲ, ಮಾಜಿ ಶಾಸಕ ಸಿ.ಎಸ್. ನಾಡಗೌಡ, ಹಮೀದ್ ಮುಶ್ರೀಪ್ ಮುಂತಾದವರು ಮಾತನಾಡಿದರು. ಮಾಜಿ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ದಿನೇಶ ಗುಂಡೂರಾವ, ಪ್ರಧಾನ ಕಾರ್ಯದರ್ಶಿ ಈಶ್ವರ ಖಂಡ್ರೆ, ಮಾಜಿ ಸಚಿವ ಎಚ್.ಸಿ. ಮಹಾದೇವಪ್ಪ, ಎಚ್.ವೈ. ಮೇಟಿ, ವಿಪ ಸದಸ್ಯ ಸುನೀಲಗೌಡ ಪಾಟೀಲ, ಪ್ರಕಾಶ ರಾಠೋಡ, ಮಾಜಿ ಶಾಸಕರಾದ ಶರಣಪ್ಪ ಸುಣಗಾರ, ಡಾ.ಮಕ್ಬೂಲ್ ಬಾಗವಾನ ಇತರರಿದ್ದರು.
ಮಾಜಿ ಜಿಲ್ಲಾಧ್ಯಕ್ಷ ರವಿಗೌಡ ಪಾಟೀಲ ಪಕ್ಷದ ಧ್ವಜ ನೀಡುವ ಮೂಲಕ ರಾಜು ಆಲಗೂರಗೆ ಅಧಿಕಾರ ಹಸ್ತಾಂತರಿಸಿದರು. ಮಹಾಂತೇಶ ಬಿರಾದಾರ ಕಾರ್ಯಕ್ರಮ ನಿರ್ವಹಿಸಿದರು. ವಿವಿಧ ಭಾಗಗಳಿಂದ ಸಾವಿರಾರು ಜನ ಆಗಮಿಸಿದ್ದರು. ಕಾರ್ಯಕರ್ತರಿಗಾಗಿ ಕಂದಗಲ್ಲ ಹನುಮಂತರಾಯ ರಂಗಮಂದಿರದಲ್ಲಿ ಊಟದ ವ್ಯವಸ್ಥೆ ಕಲ್ಪಿಸಲಾಗಿತ್ತು.

Comments
Post a Comment