ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರಕ್ಕೆ ಇಳಿದ ಬಿಜೆಪಿ ಅಭ್ಯರ್ಥಿ, ಕಾಂಗ್ರೆಸ್ಸಿಗೆ ಓಟ್ ಹಾಕಿ ಎಂದು ಮತಯಾಚನೆ




ಉಪಚುನಾವಣೆಯ ಪ್ರಚಾರದ ವೇಳೆ ಕಾಂಗ್ರೆಸ್ ಗೆ ಮತ ಹಾಕಿ ಎಂದು ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ಹೇಳಿಕೆ ಕೊಟ್ಟು ಎಡವಟ್ಟು ಮಾಡಿಕೊಂಡಿದ್ದು, ಚರ್ಚೆಗೆ ಗ್ರಾಸವಾಗಿದೆ.

ಗೋಕಾಕ್ ಉಪಚುನಾವಣೆಯ ಹಿನ್ನೆಲೆಯಲ್ಲಿ ಉಪಾರಟ್ಟಿ ಗ್ರಾಮದಲ್ಲಿ ನಡೆದ ಪ್ರಚಾರ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ಕಾಂಗ್ರೆಸ್ ಗೆ ಮತ ಹಾಕಿ ಎಂದು ಹೇಳಿದ್ದು, ಬಳಿಕ ನಕ್ಕು ಕಾಂಗ್ರೆಸ್ ನಲ್ಲೇ ಇದ್ದು ಮಾನಸಿಕವಾಗಿ ಹೀಗೆ ಹೇಳಿದ್ದೇನೆ ಎಂದು ಸಮಜಾಯಿಸಿ ಕೊಟ್ಟು ಬಿಜೆಪಿಗೆ ಮತ ಹಾಕಿ ಎಂದು ಕೇಳಿಕೊಂಡಿದ್ದಾರೆ.

ರಮೇಶ್ ಜಾರಕಿಹೊಳಿ ವಿರುದ್ಧ ಕಾಂಗ್ರೆಸ್ ನಿಂದ  ಸಹೋದರರಾದ ಲಖನ್ ಜಾರಕಿಹೊಳಿ ಹಾಗೂ ಸತೀಶ್ ಜಾರಕಿಹೊಳಿ ನಾಮಪತ್ರ ಸಲ್ಲಿಕೆ ಮಾಡಿದ್ದು, ಸತೀಶ್ ಜಾರಕಿಹೊಳಿ ಅವರ ನಾಮಪತ್ರ ನಿನ್ನೆ ತಿರಸ್ಕಾರವಾಗಿದೆ.

Comments