ರಾಜೀನಾಮೆ ನೀಡುವಂತೆ ಸಚಿವ ಶ್ರೀರಾಮುಲು ಸವಾಲು ವಿಚಾರಕ್ಕೆ ಸಂಬಂಧಿಸಿದಂತೆ ನಗರದಲ್ಲಿಂದು ಪ್ರತಿಕ್ರಿಯೆ ನೀಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಸ್ವಾರ್ಥಕ್ಕೆ ಮಾತನಾಡುವವರಿಗೆ ಉತ್ತರ ಕೊಡುವ ಅವಶ್ಯಕತೆ ಇಲ್ಲ ಎಂದಿದ್ದಾರೆ.
ಹುಣಸೂರು ಉಪಚುನಾವಣಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಇಂದು ಹೆಚ್. ವಿಶ್ವನಾಥ್ ನಾಮಪತ್ರ ಸಲ್ಲಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಶ್ರೀರಾಮುಲು, ಬಾದಾಮಿ ಶಾಸಕ ಸ್ಥಾನಕ್ಕೆ ಸಿದ್ದರಾಮಯ್ಯ ರಾಜೀನಾಮೆ ನೀಡಲಿ, ನಾನೇ ಅವರೆದುರು ಚುನಾವಣೆಗೆ ನಿಲ್ಲುವೆ ಎಂದು ಸವಾಲು ಹಾಕಿದ್ದರು.
ಶ್ರೀರಾಮುಲು ಅವರ ಸವಾಲಿಗೆ ಇಂದು ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಸ್ವಾರ್ಥಕ್ಕೆ ಮಾತನಾಡುವವರಿಗೆ ಉತ್ತರ ಕೊಡುವ ಅವಶ್ಯಕತೆಯಿಲ್ಲ. ಪಾಪ ಅವರು ನನ್ನ ಮೇಲೆ ಸೋತಿದ್ದಾರೇ ಅದಕ್ಕೆ ಈ ರೀತಿ ಮಾತನಾಡುತ್ತಾರೆ. ಶ್ರಿರಾಮುಲು ಹತಾಶರಾಗಿದ್ದಾರೆ. ಅವರಿಗೆ ಮಾನ ಮರ್ಯಾದೆ ಇದ್ದರೆ ಆಗಲೇ ರಾಜೀನಾಮೆ ಕೊಡಬೇಕಿತ್ತು ಎಂದರು.
ಶ್ರೀರಾಮುಲು ಅವರನ್ನು ಉಪಮುಖ್ಯಮಂತ್ರಿ ಮಾಡುತ್ತೇವೆ ಎಂದು ಪ್ರಚಾರ ಮಾಡಿದ್ದರು. ಈಗ ಅವರಿಗೆ ಡಿಸಿಎಂ ಪಟ್ಟ ಕೊಟ್ಟರಾ ಎಂದು ಪ್ರಶ್ನಿಸಿದ ಸಿದ್ದರಾಮಯ್ಯ, ಶಾಸಕರಲ್ಲದವರಿಗೆ ಡಿಸಿಎಂ ಸ್ಥಾನ ಕೊಟ್ಟಿದ್ದಾರೆ. ಎಸ್.ಟಿ ಗೆ 7% ಮೀಸಲಾತಿ ನೀಡದಿದ್ದರೆ ರಾಜೀನಾಮೆ ಕೊಡುತ್ತೇನೆ. ಒಂದು ನಿಮಿಷ ಇರಲ್ಲ ಎಂದು ಶ್ರೀರಾಮುಲು ಹೇಳಿದ್ದರು. ಈಗ ಏನಾಯಿತು ಎಂದು ಲೇವಡಿ ಮಾಡಿದರು.

Comments
Post a Comment