ED ಅಧಿಕಾರಿಗಳಿಗೆ ಹೆದರಿ ಯಡಿಯೂರಪ್ಪನವರನ್ನು ಭೇಟಿ ಮಾಡಿದ ಕಾಂಗ್ರೆಸ್ ನ ಶಾಸಕಿ! ಮಹತ್ವದ ಬೇಡಿಕೆಯನ್ನು ಇಟ್ಟ ಶಾಸಕಿ!

ಇಂದು ನಡೆದ ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳ್ಕರ್ ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಇಂದು ಭೇಟಿಯಾಗಿದ್ದು, ಇದು ಭಾರಿ ಕುತೂಹಲಕ್ಕೆ ಕಾರಣವಾಗಿದೆ. ಡಾಲರ್ಸ್ ಕಾಲೋನಿಯಲ್ಲಿರುವ ಯಡಿಯೂರಪ್ಪನವರ ಧವಳಗಿರಿ ನಿವಾಸಕ್ಕೆ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ ನೀಡಿದ್ದಾರೆ.

ಶಾಸಕಿಯಾಗಿ ಲಕ್ಷ್ಮಿ ಹೆಬ್ಬಾಳ್ಕರ್ ಮುಖ್ಯಮಂತ್ರಿಗಳನ್ನು ಭೇಟಿ ಮಾಡುವುದು ಸಹಜವಾದರೂ ಸಹ ಇಂದು ಅನರ್ಹ ಶಾಸಕರ ಕುರಿತ ಸುಪ್ರೀಂ ಕೋರ್ಟ್ ತೀರ್ಪು ಬಳಿಕ ಈ ಭೇಟಿ ನಡೆದಿರುವುದರಿಂದ ಸಹಜವಾಗಿಯೇ ರಾಜಕೀಯ ವಲಯದಲ್ಲಿ ಕುತೂಹಲ ಕೆರಳಿಸಿದೆ.

ರಾಜ್ಯ ರಾಜಕಾರಣದಲ್ಲಿ ಬೆಳಗಾವಿ ರಾಜಕೀಯ ಮಹತ್ವದ ಪಾತ್ರ ವಹಿಸುತ್ತಾ ಬಂದಿರುವ ಕಾರಣ ಅಲ್ಲದೆ ಕಾಂಗ್ರೆಸ್-ಜೆಡಿಎಸ್ ಮೈತ್ರಿಕೂಟ ಸರ್ಕಾರ ಪತನಗೊಳ್ಳಲು ರಮೇಶ್ ಜಾರಕಿಹೊಳಿ ಹಾಗೂ ಲಕ್ಷ್ಮಿ ಹೆಬ್ಬಾಳ್ಕರ್ ನಡುವಿನ ವಿರಸವೂ ಒಂದು ಪ್ರಮುಖ ಕಾರಣವೆಂದು ಹೇಳಲಾಗುತ್ತಿರುವ ನಡುವೆ ಮುಖ್ಯಮಂತ್ರಿ ಯಡಿಯೂರಪ್ಪನವರ ಜೊತೆಗಿನ ಲಕ್ಷ್ಮಿ ಹೆಬ್ಬಾಳ್ಕರ್ ಭೇಟಿ ಈಗ ರಾಜ್ಯ ರಾಜಕಾರಣದ ಕೇಂದ್ರಬಿಂದುವಾಗಿದೆ.

Comments