ಬಿಜೆಪಿಯ ಜಿಲ್ಲಾ ಘಟಕದ ನಡೆ ವಿರುದ್ಧ ಶಾಸಕ ಗೂಳಿಹಟ್ಟಿಶೇಖರ್ ತೀವ್ರ ಅಸಮಾಧಾನ ಹೊರ ಹಾಕಿದ್ದಾರೆ. ಪಕ್ಷ ನನ್ನನ್ನು ಕಡೆಗಣಿಸಿದರೆ ಮುಂಬರುವ ಜಿಪಂ, ತಾಪಂ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿಗಳನ್ನು ಕಣಕ್ಕಿಳಿಸಲಾಗುವುದು ಎಂಬ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.
ಪಟ್ಟಣದ ಬನಶಂಕರಿ ಕಲ್ಯಾಣ ಮಂಟಪದಲ್ಲಿ ಭಾನುವಾರ ಸ್ವಾಭಿಮಾನಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ತಾಲೂಕು ಅಧ್ಯಕ್ಷರ ಆಯ್ಕೆ ವಿಚಾರದಲ್ಲಿ ನನ್ನನ್ನು ಕಡೆಗಣಿಸಲಾಗಿದೆ. ಉದ್ದೇಶ ಪೂರ್ವಕವಾಗಿ ನನ್ನ ಹಾಗೂ ನಮ್ಮ ಕಾರ್ಯಕರ್ತರನ್ನು ಪಕ್ಷದ ಚಟುವಟಿಕೆಗಳಲ್ಲಿ ದೂರ ಇಡಲಾಗುತ್ತಿದೆ. ಇದೇ ಪರಿಸ್ಥಿತಿ ಮುಂದುವರಿದರೆ ಬೇರೆಯದೇ ಹಾದಿ ತುಳಿಯಬೇಕಾಗುತ್ತದೆ. ಮುಂದಿನ ತೀರ್ಮಾನಗಳಿಗೆ ಪಕ್ಷವೇ ಜವಬ್ದಾರಿಯಾಗಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
Comments
Post a Comment