ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹೆಸರು ಫೈನಲ್ ಮಾಡಿದ ಹೈಕಮಾಂಡ್ !! ಕೊನೆಗೂ ಡಿಕೆಶಿ ಕನಸು ನನಸು


ದಿನೇಶ್ ಗುಂಡೂರಾವ್ ರಾಜೀನಾಮೆಯಿಂದ ತೆರವಾಗಿರುವ ಕೆಪಿಸಿಸಿ ಅಧ್ಯಕ್ಷ ಸ್ಥಾನಕ್ಕೆ ಹೊಸವರ್ಷದಲ್ಲಿ ನೇಮಕಾತಿ ನಡೆಯಲಿದೆ.

ಮಾಜಿ ಸಚಿವರಾದ ಡಿ.ಕೆ. ಶಿವಕುಮಾರ್ ಮತ್ತು ಎಂ.ಬಿ. ಪಾಟೀಲ್ ಅವರ ಹೆಸರು ಪ್ರಮುಖವಾಗಿ ಕೇಳಿಬರುತ್ತಿದೆ. ಇವರಿಬ್ಬರಲ್ಲಿ ಯಾರಿಗೆ ಅಧ್ಯಕ್ಷ ಸ್ಥಾನ ಸಿಗಲಿದೆ ಎನ್ನುವುದು ಕುತೂಹಲ ಮೂಡಿಸಿದೆ.

ದಿನೇಶ್ ಗುಂಡೂರಾವ್ ಮತ್ತು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ಧರಾಮಯ್ಯ ರಾಜೀನಾಮೆ ನೀಡಿದ ಬಳಿಕ ರಾಜ್ಯಕ್ಕೆ ಆಗಮಿಸಿದ್ದ ಎಐಸಿಸಿ ವೀಕ್ಷಕರ ತಂಡ ಅಭಿಪ್ರಾಯ ಸಂಗ್ರಹಿಸಿ ಪಕ್ಷದ ಹೈಕಮಾಂಡ್ ಗೆ ವರದಿ ನೀಡಿದೆ.

ಹೈಕಮಾಂಡ್ ರಾಜ್ಯ ನಾಯಕರನ್ನು ಕರೆಸಿಕೊಂಡು ಚರ್ಚೆ ನಡೆಸಿದೆ. ಈಗಾಗಲೆ ಮಾಜಿ ಡಿಸಿಎಂ ಜಿ. ಪರಮೇಶ್ವರ್ ಅವರನ್ನು ಕರೆಸಿಕೊಂಡು ಸಮಾಲೋಚನೆ ನಡೆಸಿರುವ ಪಕ್ಷದ ವರಿಷ್ಠರು. ಸಿದ್ದರಾಮಯ್ಯ ಮತ್ತು ಹೆಚ್.ಕೆ. ಪಾಟೀಲ್, ಡಿ.ಕೆ. ಶಿವಕುಮಾರ್, ಬಿ.ಕೆ. ಹರಿಪ್ರಸಾದ್, ಮಲ್ಲಿಕಾರ್ಜುನ ಖರ್ಗೆ, ಎಂ.ಬಿ. ಪಾಟೀಲ್ ಮೊದಲಾದವರ ಜೊತೆಗೆ ಚರ್ಚೆ ನಡೆಸಲಾಗುವುದು.

ಚರ್ಚೆಯ ಬಳಿಕ ಕೆಪಿಸಿಸಿಗೆ ನೂತನ ಅಧ್ಯಕ್ಷರ ನೇಮಕಾತಿ ನಡೆಯಲಿದೆ. ಡಿ.ಕೆ. ಶಿವಕುಮಾರ್ ಅವರೇ ಅಧ್ಯಕ್ಷರಾಗುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ

Comments

Post a Comment