Breaking news !! ಅಧಿಕಾರ ಕಳೆದುಕೊಳ್ಳುವ ಸ್ಥಿತಿಯಲ್ಲಿ ಯಡಿಯೂರಪ್ಪ , 15 ಬಿಜೆಪಿ ಶಾಸಕರು ರಾಜೀನಾಮೆ - ಸ್ವಾಮೀಜಿ


ರಾಜ್ಯ ಸರ್ಕಾರವು ವಾಲ್ಮೀಕಿ ಸಮಾಜಕ್ಕೆ ಶೇ. 7.5 ರಷ್ಟು ಮೀಸಲಾತಿ ಹೆಚ್ಚಿಸದೇ ಇದ್ದರೆ ಪರಿಶಿಷ್ಟ ಪಂಗಡದ 15 ಶಾಸಕರು ರಾಜೀನಾಮೆ ನೀಡಲಿದ್ದಾರೆಂದು ವಾಲ್ಮೀಕಿ ಪೀಠದ ಪ್ರಸನ್ನಾನಂದ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸ್ವಾಮೀಜಿಗಳು, ರಾಜನಹಳ್ಳಿಯಲ್ಲಿ ಫೆ. 9 ರಂದು ವಾಲ್ಮೀಕಿ ಗುರುಪೀಠದ ವಾಲ್ಮೀಕಿ ಜಾತ್ರೆ ನಡೆಯಲಿದೆ. ಅಂದೇ ಈ ಕಾರ್ಯಕ್ರಮದಲ್ಲಿ ಭಾಗವಹಿಸುವ ಸಿಎಂ ಬಿ.ಎಸ್. ಯಡಿಯೂರಪ್ಪ ಈ ಕುರಿತು ಘೋಷಣೆ ಮಾಡಬೇಕು ಎಂದು ಒತ್ತಾಯಿಸಿದರು.

ಇನ್ನು ವಾಲ್ಮೀಕಿ ಸಮಾಜಕ್ಕೆ 7.5 ರಷ್ಟು ಮೀಸಲಾತಿ ನೀಡದಿದ್ದರೆ ಸಮಾಜದ ಶಾಸಕರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಲಿದ್ದಾರೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

Comments