ಬಿಜೆಪಿ ಅಧ್ಯಕ್ಷ ಅಮಿತ್ ಶಾ ಸಿದ್ಧಪಡಿಸಿದ್ದಾರೆ ಎನ್ನಲಾದ ಸಚಿವರ ಪಟ್ಟಿ ಅಂತಿಮಗೊಂಡರೆ ಉಪ ಚುನಾವಣೆಯಲ್ಲಿ ಜಯಗಳಿಸಿದ 7 ಶಾಸಕರ ಜತೆಗೆ 2018ರ ಚುನಾವಣೆಯಲ್ಲಿ ಗೆದ್ದಿದ್ದ ಪಕ್ಷದ ಇಬ್ಬರು ಶಾಸಕರು ಯಡಿಯೂರಪ್ಪ ಸಂಪುಟ ಸೇರ್ಪಡೆಯಾಗುವುದು ಖಚಿತ. ಸಂಪುಟಕ್ಕೆ ಸೇರ್ಪಡೆಯಾಗುವ ಶಾಸಕರ ಜತೆಗೆ ಅವರಿಗೆ ಯಾವ ಖಾತೆಗಳನ್ನು ನೀಡಬೇಕು ಎನ್ನುವುದನ್ನು ಕೂಡ ಅಮಿತ್ ಶಾ ನಿರ್ಧರಿಸಿದ್ದಾರೆ ಎನ್ನಲಾಗಿದೆ.
ಉಪ ಚುನಾವಣೆಯಲ್ಲಿ ಗೆದ್ದ 11 'ಅರ್ಹ' ಶಾಸಕರಲ್ಲಿ ಏಳು ಮಂದಿಗೆ ಮಾತ್ರ ಸಂಪುಟ ವಿಸ್ತರಣೆ ವೇಳೆ ಸ್ಥಾನ ನೀಡಲು ಅಮಿತ್ ಶಾ ಬಯಸಿದ್ದಾರೆ. ಅವರ ಜತೆಗೆ ಉಮೇಶ್ ಕತ್ತಿ ಮತ್ತು ಅರವಿಂದ ಲಿಂಬಾವಳಿ ಅವರಿಗೂ ಸಚಿವ ಸ್ಥಾನ ನೀಡಲು ಉದ್ದೇಶಿಸಿದ್ದಾರೆ. ಅವರಿಗೆ ನಿರ್ದಿಷ್ಟ ಖಾತೆಗಳನ್ನೂ ಅವರು ಅಂತಿಮಗೊಳಿಸಿದ್ದಾರೆ. ಆದರೆ ಯಡಿಯೂರಪ್ಪ ಅವರ ಪಟ್ಟಿಯೇ ಬೇರೆ ಇದೆ.
ಎಲ್ಲ 11 ಅರ್ಹ ಶಾಸಕರಿಗೂ ಈಗ ಸಚಿವ ಸ್ಥಾನ ನೀಡಲೇಬೇಕು ಎಂದು ಯಡಿಯೂರಪ್ಪ ಬಯಸಿದ್ದಾರೆ. ಅದರ ಜತೆಯಲ್ಲಿ ಸಚಿವ ಸ್ಥಾನದ ಆಕಾಂಕ್ಷಿಗಳಾದ ಉಮೇಶ್ ಕತ್ತಿ, ವಿ. ಸುನೀಲ್ ಕುಮಾರ್, ಅರವಿಂದ ಲಿಂಬಾವಳಿ, ಎಸ್. ಅಂಗಾರ, ದತ್ತಾತ್ರೇಯ ಪಾಟೀಲ ರೇವೂರ, ಎ.ರಾಮದಾಸ್, ಅಪ್ಪಚ್ಚು ರಂಜನ್ ಅವರ ಹೆಸರನ್ನೂ ನಮೂದಿಸಿದ್ದಾರೆ. ಆದರೆ ಇವರೆಲ್ಲರಿಗೂ ಸಚಿವ ಸಂಪುಟದಲ್ಲಿ ಸ್ಥಾನ ನೀಡಲು ಅಮಿತ್ ಶಾ ಒಪ್ಪುತ್ತಾರೆಯೇ ಎನ್ನುವ ಪ್ರಶ್ನೆ ಇದೆ.
Comments
Post a Comment