ಕೆಎಸ್‍ಆರ್ ಟಿಸಿ, ಬಿಎಂಟಿಸಿ, ಎನ್‍ಇಕೆಎಸ್‍ಆರ್‍ಟಿ ಹಾಗೂ ಎನ್‍ಡಬ್ಲು ಕೆಎಸ್‍ಆರ್‍ಟಿಸಿ ಸೇರಿದಂತೆ ನಾಲ್ಕು ನಿಗಮಗಳು ನಷ್ಟದಲ್ಲಿದ್ದರೂ ಸದ್ಯದ ಪರಿಸ್ಥಿತಿಯಲ್ಲಿ ಬಸ್ ಪ್ರಯಾಣವನ್ನು ಹೆಚ್ಚಳ ಮಾಡುವುದಿಲ್ಲ ಎಂದು ಸಾರಿಗೆ ಸಚಿವ ಲಕ್ಷ್ಮಣ್ ಸವದಿ ಸ್ಪಷ್ಟಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾರಿಗೆ ನಿಗಮಗಳು ನಷ್ಟದಲ್ಲಿವೆ. ದರ ಹೆಚ್ಚಳ ಮಾಡುವುದು ಅನಿವಾರ್ಯವಾದರೂ ಇಂದಿನ ಪರಿಸ್ಥಿತಿಯಲ್ಲಿ ದರ ಏರಿಕೆ ಮಾಡುವುದಿಲ್ಲ ಎಂದು ಹೇಳಿದರು.
ಶ್ರೀ ಕೋಲ್ಕತ್ತಾ ಕಾಳಿ ಮತ್ತು ಸ್ಮಶಾನ ಕಾಳಿ ದೇವಿ
ಶ್ರೀ ಟಿ.ಎಚ್. ಭಟ್ಟರ ಶ್ರೀ ಕೋಲ್ಕತ್ತಾ ಕಾಳಿ ಮತ್ತು ಸ್ಮಶಾನ ಕಾಳಿ ದೇವಿಯ ತಂತ್ರ ಮಂತ್ರಗಳ ದೈವ ಶಕ್ತಿಯಿಂದ ನಿಮ್ಮ ಯಾವುದೇ ಕಠಿಣ ಮತ್ತು ಗುಪ್ತ ಸಮಷ್ಯಗಳಿಗೆ ಕೇವಲ 3 ದಿನಗಳಲ್ಲಿ ಶಸ್ವಾತ ಪರಿಹಾರ ಮಾಡಿಕೊಡಿತ್ತಾರೆ. ಕೂಡಲೇ ನಿಮ್ಮ ಸಮಸ್ಯೆಗಳಿಗೆ ಸಂಪರ್ಕಿಸಿ ಶ್ರೀ ಟಿ.ಎಚ್.ಭಟ್ಟರ 944 888 6845
ಲಾಕ್‍ಡೌನ್ ಜಾರಿಯಾಗಿ ಸರಿಸುಮಾರು ಒಂದೂವರೆ ತಿಂಗಳಾಗಿವೆ. ಸದ್ಯಕ್ಕೆ ಯಾವುದೇ ರೀತಿಯ ಆದಾಯ ಇಲ್ಲದ ಕಾರಣ ನಷ್ಟ ಸರಿದೂಗಿಸುವುದು ಸುಲಭದ ಮಾತಲ್ಲ. ಸರ್ಕಾರ ನಷ್ಟದ ಪ್ರಮಾಣವನ್ನು ಭರಿಸಲಿದೆ ಎಂದು ತಿಳಿಸಿದರು.
ಶ್ರೀ ಕೋಲ್ಕತ್ತಾ ಕಾಳಿ ಮತ್ತು ಸ್ಮಶಾನ ಕಾಳಿ ದೇವಿ
ನಿಮ್ಮ ಸಮಸ್ಯೆಗಳಾದ: ಗಂಡ ಹೆಂಡತಿಯ ಸಮಸ್ಯೆ, ಕೋರ್ಟ್ ಕೇಸ, ಡೈವೋರ್ಸ್, ಮದುವೆ ವಿಳಂಬ, ಸ್ತ್ರೀ-ಪುರುಷ ಇಷ್ಟಪಟ್ಟವರು ನಿಮ್ಮಂತೆ ಆಗಲು, ಬಿಸಿನೆಸ್ ನಲ್ಲಿ ಲಾಭ – ನಷ್ಟ , ಅತ್ತೆ ಸೊಸೆ ರಾಜಕೀಯ, ಉದ್ಯೋಗ, ಜನವಶ, ಸಾಲದಬಾಧೆ, ಶತ್ರು ಪೀಡೆ ,ಮನೆಯಲ್ಲಿ ಅಶಾಂತಿ, ಕೊರತೆ, ಜೀವನದಲ್ಲಿ ಅಭಿವೃದ್ಧಿ ಮತ್ತು ಏಳಿಗೆ ಆಗದೇ ನೊಂದಿದ್ದರೆ ಕೂಡಲೇ ಟಿ.ಎಚ್.ಭಟ್ ಗುರೂಜಿಯವರನ್ನು ಸಂಪರ್ಕಿಸಿ 944 888 6845
ಮಹಾರಾಷ್ಟ್ರ, ಒಡಿಶಾ ಸೇರಿದಂತೆ ಬೇರೆ ಬೇರೆ ರಾಜ್ಯಗಳಲ್ಲಿ ಪ್ರಯಾಣ ದರವನ್ನು ಏರಿಕೆ ಮಾಡಲಾಗಿದೆ. ನಮ್ಮ ಸರ್ಕಾರ ನಷ್ಟದಲ್ಲಿದ್ದರೂ ಪ್ರಯಾಣಿಕರ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ದರ ಏರಿಕೆ ಮಾಡಬಾರದೆಂಬ ತೀರ್ಮಾನಕ್ಕೆ ಬಂದಿದ್ದೇವೆ ಎಂದರು.
ನಾಳೆ ಪ್ರಾಯೋಗಿಕವಾಗಿ ನಿರ್ಧಿಷ್ಟ ಪ್ರಮಾಣದ ಬಸ್‍ಗಳು ಸಂಚರಿಸಲಿವೆ. ಜನರ ಪ್ರತಿಕ್ರಿಯೆ ನೋಡಿಕೊಂಡು ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಹೆಚ್ಚಿನ ಬಸ್ ಸೌಲಭ ಹೆಚ್ಚಿಸುವುದಾಗಿ ಹೇಳಿದರು.
ಬಸ್, ಟ್ಯಾಕ್ಸಿ, ವೋಲಾ, ಊಬರ್ ಮತ್ತಿತರ ವಾಹನಗಳಲ್ಲಿ ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸ್ಯಾನಿಟೈಸರ್ ಬಳಕೆ, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು, ಒಂದು ವೇಳೆ ನಿಯಮಗಳನ್ನು ಉಲ್ಲಂಘಿಸಿದರೆ ಅಂಥವರ ಮೇಲೆ ಕಾನೂನು ಕ್ರಮ ಜರುಗಿಸಬೇಕಾಗುತ್ತದೆ ಎಂದು ಎಚ್ಚರಿಕೆ ಕೊಟ್ಟರು.
ಈಗಾಗಲೇ ಇಲಾಖೆ ಅಧಿಕಾರಿಗಳು ಪ್ರಯಾಣಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಎಲ್ಲ ರೀತಿಯ ಕ್ರಮಗಳನ್ನು ಕೈಗೊಂಡಿದ್ದಾರೆ. ಪ್ರಯಾಣಿಕರು ಕೂಡ ಈ ಹಿಂದೆ ನೀಡಿದ ಸಹಕಾರದಂತೆ ಮುಂದೆಯೂ ನೀಡಬೇಕು ಎಂದು ಮನವಿ ಮಾಡಿದರು.
ಕಂಟೋನ್ಮೆಂಟ್ ಮತ್ತು ರೆಡ್‍ಜೋನ್‍ಗಳಲ್ಲಿ ಯಥಾಸ್ಥಿತಿ ಮುಂದುವರೆಯಲಿದೆ. ಇಲ್ಲಿ ಪರಿಸ್ಥಿತಿಗೆ ಅನುಗುಣವಾಗಿ ನಿರ್ಧಾರವನ್ನು ತೆಗೆದುಕೊಳ್ಳಲಿದ್ದೇವೆ ಎಂದು ಹೇಳಿದರು. ಶಿವಾಜಿನಗರ ಕ್ಷೇತ್ರದಿಂದ ಆಯ್ಕೆಯಾಗಿರುವ ಹಿನ್ನಲೆಯಲ್ಲಿ ರಿಜ್ವಾನ್ ಅರ್ಷದ್‍ರಿಂದ ತೆರವಾಗಿರುವ ಎಂಎಲ್‍ಸಿ ಸ್ಥಾನಕ್ಕೆ ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ.
ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅಥಣಿ ಕ್ಷೇತ್ರದಿಂದ ಸ್ಪರ್ಧಿಸಿದ್ದ ಲಕ್ಷ್ಮಣ ಸವದಿ ಸೋತಿದ್ದರು, ಸಮ್ಮಿಶ್ರ ಸರ್ಕಾರ ಪತನಗೊಂಡು ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಆಗಸ್ಟ್ 20ರಂದು ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ್ದರು.
ಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಆರು ತಿಂಗಳೊಳಗೆ ಪರಿಷತ್ ಅಥವಾ ವಿಧಾನಸಭೆಯಿಂದ ಜನಪ್ರತಿನಿಧಿಗಳು ಆಯ್ಕೆಯಾಗಲೇ ಬೇಕೆಂಬ ಕಾನೂನು ಇರುವುದರಿಂದ ಸವದಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾಗಬೇಕಿದೆ. ಸರ್ಕಾರ 117 ಶಾಸಕರಿದ್ದರು. ಕಾಂಗ್ರೆಸ್ ಮತ್ತು ಜೆಡಿಎಸ್ 100 ಶಾಸಕರಿದ್ದಾರೆ. ಹೀಗಾಗಿ ವಿರೋಧ ಪಕ್ಷಗಳು ಯಾವುದೇ ಸವಾಲು ಹಾಕಲು ಸಾಧ್ಯವಿಲ್ಲ.
Comments
Post a Comment