ಬಿಜೆಪಿ ಮುಖಂಡರ ಕಿರುಕುಳ ತಾಳಲಾರದೆ ಸ್ವ ಇಚ್ಛೆಯಿಂದ ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ ಎಂದು ಧಾರವಾಡ ಜಿಪಂ ಸದಸ್ಯರಾಗಿದ್ದ ಯೋಗೇಶ್‌ಗೌಡ ಅವರ ಪತ್ನಿ ಮಲ್ಲಮ್ಮ ಹೇಳಿದರು.
ಇಲ್ಲಿನ ಕಾಂಗ್ರೆಸ್ ಕಚೇರಿಯಲ್ಲಿ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೇ ಹೆಬ್ಬಾಳಕರ್ ಸಮ್ಮುಖ ಬುಧವಾರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡು ಅವರು ಮಾತನಾಡಿದರು. ''ಪತಿ ಯೋಗೇಶ್‌ಗೌಡ ಅವರ ಅರ್ಧಕ್ಕೆ ನಿಂತ ಕೆಲಸಗಳನ್ನು ಪೂರ್ಣಗೊಳಿಸುವುದೇ ನನ್ನ ಮೊದಲ ಆದ್ಯತೆ. ನೆಮ್ಮದಿ, ಮಕ್ಕಳ ಭವಿಷ್ಯ ಮತ್ತು ಜನಸೇವೆಗಾಗಿ ಕಾಂಗ್ರೆಸ್ ಸೇರ್ಪಡೆಯಾಗಿದ್ದೇನೆ'', ಎಂದರು.
''ಪತಿಯ ಹತ್ಯೆಯಲ್ಲಿ ಬಿಜೆಪಿ ಮುಖಂಡರು ರಾಜಕೀಯ ಮಾಡಿದ್ದಾರೆ. ಬಿಜೆಪಿ ಮತ್ತು ನನ್ನ ಕುಟುಂಬದಿಂದ ಒತ್ತಡವಿತ್ತು. ಪತಿಯ ಸಾವು ನನ್ನನ್ನು ಕಂಗೆಡಿಸಿತ್ತು. ಅವರ ಸಾವು ಮುಂದಿಟ್ಟುಕೊಂಡು ರಾಜಕಾರಣ ಮಾಡೋದು ನನಗೆ ಇಷ್ಟವಿಲ್ಲ. ಮನೆಯವರ ಬಯಕೆಯಂತೆ ಪತಿಯ ಕೊಲೆ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎನ್ನುವ ಇಚ್ಛೆ ನನಗೂ ಇದೆ. ಈ ಬಗ್ಗೆ ಮುಖ್ಯಮಂತ್ರಿ ಅವರನ್ನು ಆಗ್ರಹಿಸುತ್ತೇನೆ'', ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.
Comments
Post a Comment