ಜೆಡಿಎಸ್ ಅಸ್ತಿತ್ವ ಕಳೆದುಕೊಳ್ಳುತ್ತಿದೆ ಎಂದು ಅನೇಕರು ಟೀಕಿಸುತ್ತಿದ್ದಾರೆ. ನಿಷ್ಠಾವಂತ ಕಾರ್ಯಕರ್ತರು ಇರುವವರೆವಿಗೂ ಪಕ್ಷವನ್ನು ನಿರ್ನಾಮ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ಶಾಸಕ ಡಿ.ಸಿ.ತಮ್ಮಣ್ಣ ಹೇಳಿದರು.
ಪಟ್ಟಣದ ತಮ್ಮ ನಿವಾಸದಲ್ಲಿ ಜೆಡಿಎಸ್ ತೊರೆದು ಬಿಜೆಪಿ ಸೇರಿದ್ದ ಪೀಕಾರ್ಡ್ ಬ್ಯಾಂಕ್ ನಿರ್ದೇಶಕ ಹೂತಗೆರೆ ಸತೀಶ ಹಾಗೂ ಬೆಂಬಲಿಗರನ್ನು ಮರಳಿ ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡು ಅಭಿನಂದಿಸಿ ಮಾತನಾಡಿದ ಅವರು, ಜೆಡಿಎಸ್‌ಗೆ ಮುಖಂಡರು ಹಾಗೂ ಕಾರ್ಯಕರ್ತರು ದೊಡ್ಡ ಶಕ್ತಿಯಾಗಿದ್ದಾರೆ. ಈ ಎಲ್ಲರ ಬೆಂಬಲ ಇರುವವರೆಗೆ ಪಕ್ಷದ ಶಕ್ತಿಯನ್ನು ಕುಂದಿಸಲು ಸಾಧ್ಯವಿಲ್ಲ ಎಂದು ಕಿಡಿಕಾರಿದರು.
ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಗಳಲ್ಲಿ ಜೆಡಿಎಸ್ ಶಕ್ತಿ ಅರಿವು ಎಲ್ಲರಿಗೂ ಗೊತ್ತಾಗಲಿದೆ. ಪಕ್ಷದಲ್ಲಿ ಈ ಹಿಂದೆ ನಡೆದಿರುವ ಮನಸ್ಥಾಪಗಳನ್ನು ಬಿಟ್ಟು ಕಾರ್ಯಕರ್ತರು ಮುಂದಿನ ಚುನಾವಣೆವರೆಗೆ ಪಕ್ಷವನ್ನು ಯಾವ ರೀತಿ ಸಂಘಟಿಸಬೇಕು ಎಂದು ಚಿಂತಿಸಬೇಕೆಂದು ಸಲಹೆ ನೀಡಿದರು.
Comments
Post a Comment