ಇದೀಗ ಬಂದ ಸುದ್ದಿ: ಕೊನೆಗೂ ರಿಲೀಸ್ ಆಯ್ತು ಎಸ್ ಎಸ್ ಎಲ್ ಸಿ ಪರೀಕ್ಷೆಯ ವೇಳಾಪಟ್ಟಿ

ಕೊರೊನಾ ನಿಯಂತ್ರಣಕ್ಕಾಗಿ ಕೇಂದ್ರ ಸರ್ಕಾರ ಲಾಕ್‌ ಡೌನ್‌ ಜಾರಿಗೊಳಿಸಿದ್ದ ಹಿನ್ನಲೆಯಲ್ಲಿ ಮಾರ್ಚ್‌ ನಲ್ಲಿ ನಡೆಯಬೇಕಿದ್ದ ಹತ್ತನೇ ತರಗತಿ ಪರೀಕ್ಷೆಗಳನ್ನು ಮುಂದೂಡಲಾಗಿತ್ತು. ಅಲ್ಲದೇ‌ ಬಾಕಿ ಉಳಿದಿದ್ದ ಪಿಯುಸಿ ಇಂಗ್ಲೀಷ್ ಪರೀಕ್ಷೆಯನ್ನೂ ಸಹ ರದ್ದುಗೊಳಿಸಿತ್ತು.

ಶ್ರೀ ಕೋಲ್ಕತ್ತಾ ಕಾಳಿ ಮತ್ತು ಸ್ಮಶಾನ ಕಾಳಿ ದೇವಿ

ಶ್ರೀ ಟಿ.ಎಚ್. ಭಟ್ಟರ ಶ್ರೀ ಕೋಲ್ಕತ್ತಾ ಕಾಳಿ ಮತ್ತು ಸ್ಮಶಾನ ಕಾಳಿ ದೇವಿಯ ತಂತ್ರ ಮಂತ್ರಗಳ ದೈವ ಶಕ್ತಿಯಿಂದ ನಿಮ್ಮ ಯಾವುದೇ ಕಠಿಣ ಮತ್ತು ಗುಪ್ತ ಸಮಷ್ಯಗಳಿಗೆ ಕೇವಲ 3 ದಿನಗಳಲ್ಲಿ ಶಸ್ವಾತ ಪರಿಹಾರ ಮಾಡಿಕೊಡಿತ್ತಾರೆ. ಕೂಡಲೇ ನಿಮ್ಮ ಸಮಸ್ಯೆಗಳಿಗೆ ಸಂಪರ್ಕಿಸಿ ಶ್ರೀ ಟಿ.ಎಚ್.ಭಟ್ಟರ 944 888 6845


ಅಂದಿನಿಂದ ಸತತವಾಗಿ ಕಳೆದ ಒಂದೂವರೆ ತಿಂಗಳಿಗೂ ಅಧಿಕ ಕಾಲದಿಂದ ಲಾಕ್‌ ಡೌನ್‌ ಜಾರಿಯಲ್ಲಿದ್ದ ಕಾರಣ ಈವರೆಗೆ ಪರೀಕ್ಷಾ ದಿನಾಂಕ ಪ್ರಕಟವಾಗಿರಲಿಲ್ಲ. ಇದೀಗ ನಾಲ್ಕನೇ ಹಂತದ ಲಾಕ್‌ ಡೌನ್‌ ಸಂದರ್ಭದಲ್ಲಿ ಬಹಳಷ್ಟು ಸಡಿಲಿಕೆ ನೀಡಿರುವುದರಿಂದ ಇಂದು ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ ಹತ್ತನೇ ಹಾಗೂ ಪಿಯುಸಿ ಪರೀಕ್ಷಾ ದಿನಾಂಕಗಳನ್ನು ಪ್ರಕಟಿಸಿದ್ದಾರೆ.

ವಿದ್ಯಾರ್ಥಿಗಳ ಸುರಕ್ಷತೆ ದೃಷ್ಟಿಯಿಂದ ಮಾಸ್ಕ್‌ ಧರಿಸಿ ಪರೀಕ್ಷೆ ಬರೆಯುವುದು ಕಡ್ಡಾಯವಾಗಿದ್ದು, ಸಾಮಾಜಿಕ ಅಂತರವನ್ನೂ ಕಾಪಾಡಿಕೊಳ್ಳಲಾಗುತ್ತದೆ ಎಂದು ಸಚಿವ ಸುರೇಶ್‌ ಕುಮಾರ್‌ ತಿಳಿಸಿದರಲ್ಲದೇ ವಿದ್ಯಾರ್ಥಿಗಳಿಗೆ ವಿವಿಧ ಸಂಸ್ಥೆಗಳ ಸಹಕಾರದೊಂದಿಗೆ ಮಾಸ್ಕ್ ವಿತರಿಸಲಾಗುತ್ತದೆ ಎಂದರು.

ಅಲ್ಲದೇ ಹತ್ತನೇ ತರಗತಿ ಪರೀಕ್ಷೆ ನಡೆಯುವ ಎಲ್ಲಾ 2879 ಪರೀಕ್ಷಾ ಕೇಂದ್ರಗಳಲ್ಲೂ ಸ್ಯಾನಿಟೈಸರ್‌ ವ್ಯವಸ್ಥೆ ಮಾಡಲಾಗುತ್ತದೆ ಎಂದು ಹೇಳಿದ ಶಿಕ್ಷಣ ಸಚಿವರು ಎಂಬೆಸಿ ಗ್ರೂಪ್‌ ಸ್ಯಾನಿಟೈಸರ್‌ ನೀಡಲು ಮುಂದೆ ಬಂದಿದೆ ಎಂದು ಹೇಳಿದರು. ಎಸ್.ಎಸ್.‌ಎಲ್.ಸಿ. ಪರೀಕ್ಷೆಗೆ ಒಟ್ಟು 43720 ಕೊಠಡಿಗಳನ್ನು ಉಪಯೋಗಿಸಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.
ಪರೀಕ್ಷೆ ನಡೆಯುವ ಮುನ್ನ ಎಲ್ಲ ಕೊಠಡಿಗಳನ್ನು ಸ್ಯಾನಿಟೈಸ್‌ ಮಾಡಲಾಗುತ್ತಿದ್ದು, ಥರ್ಮಲ್‌ ಸ್ಕ್ರೀನಿಂಗ್‌ ವೇಳೆ ಯಾವುದಾದರೂ ವಿದ್ಯಾರ್ಥಿಗೆ ಅನಾರೋಗ್ಯದ ಲಕ್ಷಣ ಕಂಡು ಬಂದರೆ ಅಂತಹ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಪರೀಕ್ಷೆಗೆ ಅವಕಾಶ ಮಾಡಲಾಗುತ್ತದೆ ಎಂದು ಸಚಿವ ಸುರೇಶ್‌ ಕುಮಾರ್‌ ತಿಳಿಸಿದರು.
ವಿದ್ಯಾರ್ಥಿಗಳು ತಮಗೆ ಹತ್ತಿರವಿರುವ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆಯುವ ಅವಕಾಶ ಕಲ್ಪಿಸಲಾಗುತ್ತಿದ್ದು, ಪ್ರತಿದಿನ ವಿದ್ಯಾರ್ಥಿಗಳ ಆರೋಗ್ಯ ತಪಾಸಣೆ ನಡೆಸಲಾಗುತ್ತದೆ ಎಂದು ಸುರೇಶ್‌ ಕುಮಾರ್‌ ಹೇಳಿದ್ದಾರೆ.
ರಾಜ್ಯದಲ್ಲಿ 8 ಲಕ್ಷದ 48 ಸಾವಿರ 196 ವಿದ್ಯಾರ್ಥಿಗಳು ಹತ್ತನೇ ತರಗತಿ ಪರೀಕ್ಷೆ ಬರೆಯಲಿದ್ದಾರೆ.
ಎಸ್.‌ಎಸ್.‌ಎಲ್.‌ಸಿ. ಪರೀಕ್ಷೆಯನ್ನು ಜೂನ್‌ 25 ರಿಂದ ಜುಲೈ 4 ರವರೆಗೆ ನಡೆಸಲಾಗುತ್ತದೆ. ಮುಂದಿನ ದಿನಗಳಲ್ಲಿ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸಲಾಗುತ್ತದೆ.

ಪಿಯುಸಿ ಇಂಗ್ಲೀಷ್‌ ವಿಷಯದ ಪರೀಕ್ಷೆಯನ್ನು ಜೂನ್‌ 18 ರಂದು ನಡೆಸಲಾಗುತ್ತದೆ.

Comments