ಬಿಜೆಪಿ ಸರ್ಕಾರ ಪತನದ ಮುನ್ಸೂಚನೆ ನೀಡಿದ ಸಿದ್ದರಾಮಯ್ಯ !! ಯಡಿಯೂರಪ್ಪ ಸರ್ಕಾರ ಉಳಿಸಿಕೊಳ್ಳಲು ಸಹಾಯಕ್ಕೆ ಮುಂದಾದ ರೈತ ನಾಯಕ
ದಿಢೀರ್ ಬೆಳವಣಿಗೆಯೊಂದರಲ್ಲಿ ಬಿಜೆಪಿ ಸರ್ಕಾರ ಮತ್ತೊಮ್ಮೆ ಇಕ್ಕಟ್ಟಿಗೆ ಸಿಲುಕಿದ್ದು, ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು, ರಾಜ್ಯ ಮಂತ್ರಿಮಂಡಲದ ಮೇಲೆ ನಮಗೆ ನಂಬಿಕೆ ಇಲ್ಲ, ಮತ್ತೊಮ್ಮೆ ವಿಶ್ವಾಸ ಮತ ಸಾಬೀತು ಮಾಡಲು ಅವಕಾಶ ನೀಡಬೇಕು ಎಂದು ಕೋರಿದ್ದಾರೆ.
ವಿಪಕ್ಷ ನಾಯಕ ಸಿದ್ದರಾಮಯ್ಯ ಅವರ ಮನವಿಗೆ ಸ್ಪೀಕರ್ ಅನುಮತಿ ನೀಡಿದ್ದಾರೆ. ಈ ಹಿನ್ನೆಲೆಯಲ್ಲಿ ಸಿಎಂ ಯಡಯೂರಪ್ಪ ಅವರಿಗೆ ಮತ್ತೊಮ್ಮೆ ಅಗ್ನಿ ಪರೀಕ್ಷೆ ಕಾದಿದ್ದು, ನಗರದ ಖಾಸಗಿ ಹೊಟೇಲ್ ನಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ ಶಾಸಕಾಂಗ ಪಕ್ಷದ ಸಭೆ ನಡೆದಿದೆ ಎಂದು ವರದಿಯಾಗಿದ್ದು, ಈ ಸಭೆಯಲ್ಲಿ 80ಕ್ಕೂ ಅಧಿಕ ಶಾಸಕರು ಭಾಗವಹಿಸಿದ್ದಾರೆ ಎಂದು ತಿಳಿದು ಬಂದಿದೆ.
ಕೋವಿಡ್ ಸಂದರ್ಭದಲ್ಲಿ 15ಕ್ಕೂ ಅಧಿಕ ಶಾಸಕರು ಗೈರಾಗಿದ್ದಾರೆ. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಅವಿಶ್ವಾಸ ನಿರ್ಣಯ ಮಂಡಿಸಿದೆ. ಬೆಂಕಿಯಿಲ್ಲದೇ ಹೊಗೆಯಾಡುತ್ತಾ ಎನ್ನುವಂತೆಯೇ ಸಿದ್ದರಾಮಯ್ಯ ಅವರು, ಬಿಜೆಪಿಯೊಳಗಿನ ಪರಿಸ್ಥಿತಿಗಳನ್ನು ತಿಳಿಯದೇ ಅವಿಶ್ವಾಸ ನಿರ್ಣಯ ಮಂಡಿಸುತ್ತಾರೆಯೇ? ಎನ್ನುವ ಪ್ರಶ್ನೆಗಳಿಗೆ ಕಾರಣವಾಗಿದೆ.
ಅವಿಶ್ವಾಸ ಮಂಡನೆಯಾಗುತ್ತಿದ್ದಂತೆಯೇ ಸಿಎಂ ಯಡಿಯೂರಪ್ಪ ಅವರು ವಿಪ್ ಜಾರಿ ಮಾಡಿದ್ದಾರೆ. ಬೆಳಗ್ಗೆಯಿಂದ ಸಂಜೆಯ ವರೆಗೆ ಎಲ್ಲ ಶಾಸಕರೂ ಸದನದಲ್ಲಿ ಹಾಜರಿರಬೇಕು ಎಂದು ತಿಳಿಸಿದ್ದಾರೆ. ಕಾಂಗ್ರೆಸ್ಗಿಂತ ಬಿಜೆಪಿ ಸದಸ್ಯರು ಹೆಚ್ಚಿದ್ದರೂ ಕೊರೋನಾ ಹಿನ್ನಲೆ ಸರ್ಕಾರದ ಅನೇಕ ಸಚಿವರು, ಶಾಸಕರು ಹಾಜರಾಗುವಂತೆ ಇಲ್ಲ. ಈ ಹಿನ್ನಲೆ ಸರ್ಕಾರ ವಿಪ್ ಜಾರಿ ಮೊರೆ ಹೋಗಿದೆ.
ಈ ದಿಢೀರ್ ಬೆಳವಣಿಗೆಯ ನಡುವೆಯೇ ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಯಡಿಯೂರಪ್ಪನವರನ್ನು ಭೇಟಿ ಮಾಡಿರುವ ವಿಚಾರಗಳೂ ಚರ್ಚೆಗೀಡಾಗುತ್ತಿವೆ. ಯಡಿಯೂರಪ್ಪ ಅವರ ಸರ್ಕಾರ ಉಳಿಯುತ್ತಾ, ಉರುಳುತ್ತಾ ಎಂಬ ಬಗ್ಗೆ ಚರ್ಚೆಗಳು ಆರಂಭವಾಗಿದೆ.
Comments
Post a Comment