ರಾಜರಾಜೇಶ್ವರಿ ನಗರ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಹೆಸರು ಫೈನಲ್, ಸಿದ್ದರಾಮಯ್ಯ ಸೂಚಿಸಿದ ಬಲಿಷ್ಠ ನಾಯಕ ಕಾಂಗ್ರೆಸ್ ಅಭ್ಯರ್ಥಿ, ಮರಿ ಸಿದ್ದುಗೆ ಸಿಕ್ಕಿತು ಕಾಂಗ್ರೆಸ್ ಉನ್ನತ ಪಟ್ಟ

 

ರಾಜರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣೆ ದಿನಾಂಕ ಘೋಷಣೆಯಾಗಿದೆ. ಬಿಜೆಪಿಯಿಂದ ಮಾಜಿ ಶಾಸಕ ಮುನಿತ್ನ ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿ ಹಬ್ಬಿದೆ. ಕಾಂಗ್ರೆಸ್ ಅಭ್ಯರ್ಥಿ ಯಾರು? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.


ಬೆಂಗಳೂರು ಗ್ರಾಮಾಂತರ ಕ್ಷೇತ್ರದ ವ್ಯಾಪ್ತಿಗೆ ರಾಜರಾಜೇಶ್ವರಿ ನಗರ ಕ್ಷೇತ್ರ ಬರುತ್ತದೆ. ಕ್ಷೇತ್ರದ ಸಂಸದರು ಕೆಪಿಸಿಸಿ ಅಧ್ಯಕ್ಷ ಡಿ. ಕೆ. ಶಿವಕುಮಾರ್ ಸಹೋದರ ಡಿ. ಕೆ. ಸುರೇಶ್. ಆದ್ದರಿಂದ, ಕ್ಷೇತ್ರದ ಉಪ ಚುನಾವಣೆ ಭಾರಿ ನೀರಿಕ್ಷೆ ಹುಟ್ಟಿಸಿದೆ.

ಮುನಿರತ್ನ ಅವರು ಎರಡು ಬಾರಿ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದರು. ಅವರ ರಾಜೀನಾಮೆಯಿಂದ ತೆರವಾದ ಕ್ಷೇತ್ರಕ್ಕೆ ಈಗ ಚುನಾವಣೆ ನಡೆಯುತ್ತಿದೆ. ಎರಡು ಬಾರಿ ಕಾಂಗ್ರೆಸ್ ಕ್ಷೇತ್ರದಲ್ಲಿ ಗೆಲುವು ಸಾಧಿಸಿತ್ತು. ಉಪ ಚುನಾವಣೆಯಲ್ಲಿಯೂ ಕ್ಷೇತ್ರವನ್ನು ಉಳಿಸಿಕೊಳ್ಳಲಾಗುತ್ತದೆಯೇ ಕಾದು ನೋಡಬೇಕಿದೆ.

ಕಾಂಗ್ರೆಸ್ ಟಿಕೆಟ್‌ಗೆ ಹಲವು ಹೆಸರುಗಳು ಕೇಳಿ ಬರತ್ತಿವೆ. ಪ್ರಿಯಾಕೃಷ್ಣ, ರಾಜ್‌ಕುಮಾರ್, ಮಾಗಡಿ ಬಾಲಕೃಷ್ಣ ಅವರ ಹೆಸರುಗಳಿದ್ದು, ಯಾರಿಗೆ ಟಿಕೆಟ್ ಸಿಗಲಿದೆ ಎಂದು ಕಾದು ನೋಡಬೇಕಿದೆ. ನವೆಂಬರ್ 3ರಂದು ಚುನಾವಣೆ ನಡೆಯಲಿದೆ.

ಯಾರು ಈ ರಾಜಕುಮಾರ್?

ರಾಜ್ ಕುಮಾರ್ (ಐಡಿಯಲ್ ರಾಜಕುಮಾರ್) ಬೆಂಗಳೂರು ಉತ್ತರ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರು. ಮುನಿರತ್ನ ಕಾಂಗ್ರೆಸ್ ಪಕ್ಷ ತೊರೆದ ಮೇಲೆ ರಾಜ್ ಕುಮಾರ್ ಆರ್. ಆರ್. ನಗರ ಕ್ಷೇತ್ರದ ಕಾಂಗ್ರೆಸ್ ಜವಾಬ್ದಾರಿ ಹೊತ್ತಿದ್ದಾರೆ. ಹಿಂದಿನ ಚುನಾವಣೆಗಳಲ್ಲೂ ರಾಜ್ ಕುಮಾರ್ ಹೆಸರು ಕೇಳಿ ಬಂದಿತ್ತು.

ಯಾರಿಗೆ ಸಿಗಲಿದೆ ಟಿಕೆಟ್?

ರಾಜರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಸಿದ್ಧ ಎಂದು ರಾಜ್ ಕುಮಾರ್ ಹೇಳಿದ್ದಾರೆ. ಪಕ್ಷದ ಹೈಕಮಾಂಡ್ ಸೂಚಿಸಿದರೆ ಮುನಿರತ್ನ ವಿರುದ್ಧ ಸ್ಪರ್ಧೆ ಮಾಡುತ್ತೇನೆ ಎಂದು ಹೇಳಿದ್ದಾರೆ. ಯಾರಿಗೆ ಟಿಕೆಟ್ ಎಂಬ ಚರ್ಚೆ ಇನ್ನೂ ನಡೆಯುತ್ತಿದೆ.

ತೀವ್ರ ಪೈಪೋಟಿ ನಡೆಯಲಿದೆ

ಆರ್. ಆರ್. ನಗರದಲ್ಲಿ ಯಾರೇ ಅಭ್ಯರ್ಥಿಯಾದರೂ ತೀವ್ರ ಪೈಪೋಟಿ ನಡೆಯಲಿದೆ. ಕ್ಷೇತ್ರದಲ್ಲಿ ಎರಡು ಬಾರಿ ಗೆದ್ದಿರುವ ಮುನಿರತ್ನ ಅಪಾರವಾದ ಜನ ಬೆಂಬಲ ಹೊಂದಿದ್ದಾರೆ. ಈಗ ಅವರು ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದರೆ ಪ್ರಬಲ ಪೈಪೋಟಿ ಎದುರಾಗಲಿದೆ.

ಜೆಡಿಎಸ್ ಅಭ್ಯರ್ಥಿ ಯಾರು?

ಆರ್. ಆರ್. ನಗರದಲ್ಲಿ ಜೆಡಿಎಸ್ ಅಭ್ಯರ್ಥಿ ಯಾರು? ಎಂಬದು ಸಹ ಕುತೂಹಲಕ್ಕೆ ಕಾರಣವಾಗಿದೆ. 2018ರ ಚುನಾವಣೆಯಲ್ಲಿ ಪಕ್ಷದಿಂದ ನಟಿ ಅಮೂಲ್ಯ ಮಾವ ಜಿ. ಎಚ್. ರಾಮಚಂದ್ರ ಅಭ್ಯರ್ಥಿಯಾಗಿದ್ದರು. 60,360 ಮತಗಳನ್ನು ಪಡೆದಿದ್ದರು.

Comments