Breaking news !! ಬಿಜೆಪಿ ಸರ್ಕಾರ ದ ಮೊದಲ ವಿಕೆಟ್ ಪತನ , ಪಕ್ಷ ತೊರೆದ ಬಲಿಷ್ಠ ಸಚಿವ

 


ಪ್ರವಾಸೋದ್ಯಮ ಸಚಿವ ಸಿ. ಟಿ. ರವಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕಗೊಂಡಿದ್ದಾರೆ. ಸಚಿವ ಸ್ಥಾನಕ್ಕೆ ಅವರು ರಾಜೀನಾಮೆ ನೀಡಿ ಪಕ್ಷ ಸಂಘಟನೆಯಲ್ಲಿ ಸಂಪೂರ್ಣವಾಗಿ ತೊಡಗಿಸಿಕೊಳ್ಳಲಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ.


ಭಾನುವಾರ ಬೆಂಗಳೂರಿನಲ್ಲಿ ಮಾತನಾಡಿದ ಸಚಿವ ಸಿ. ಟಿ. ರವಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವ ಕುರಿತು ಮಾತನಾಡಿದರು. "ಒಬ್ಬರಿಗೆ ಒಂದೇ ಹುದ್ದೆ ಎಂಬ ಸೂತ್ರದಂತೆ ಪಕ್ಷ ಸೂಚನೆ ನೀಡಿದರೆ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಸಿದ್ಧ" ಎಂದರು.



 

ಮುಖ್ಯಮಂತ್ರಿಗಳ ಗೃಹ ಕಚೇರಿ ಕೃಷ್ಣಾದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, "ನಾನು ಪಕ್ಷದ ಶಿಸ್ತಿನ ಸಿಪಾಯಿ. ಪಕ್ಷ ಯಾವ ಸೂಚನೆ ನೀಡುತ್ತದೆಯೋ ಅದರಂತೆ ನಡೆದುಕೊಳ್ಳುತ್ತೇನೆ. ರಾಜೀನಾಮೆಗೆ ಸೂಚಿಸಿದರೆ ತಕ್ಷಣವೇ ಸಚಿವ ಸ್ಥಾನ ಬಿಡುತ್ತೇನೆ" ಎಂದು ಹೇಳಿದರು.



BJP National General Secretary CT Ravi May Quit Minister Post 

ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಶಾಸಕ ಸಿ. ಟಿ. ರವಿ (53) ಬಿ. ಎಸ್. ಯಡಿಯೂರಪ್ಪ ಸಂಪುಟದಲ್ಲಿ ಕನ್ನಡ ಮತ್ತು ಸಂಸ್ಕೃತಿ ಹಾಗೂ ಪ್ರವಾಸೋದ್ಯಮ ಇಲಾಖೆ ಸಚಿವರು. ಒಬ್ಬರಿಗೆ ಒಂದೇ ಹುದ್ದೆ ಎಂಬ ಅಲಿಖಿತ ನಿಯಮ ಬಿಜೆಪಿಯಲ್ಲಿದೆ.

Comments