ಬ್ರೇಕಿಂಗ್ ನ್ಯೂಸ್ !! ಡಿಕೆ ಶಿವಕುಮಾರ್ ಗೆ ಬಿಗ್ ರಿಲೀಫ್ ನೀಡಿದ ಹೈಕೋರ್ಟ್

 


ಅಕ್ರಮ ಆಸ್ತಿ ಸಂಪಾದನೆ ಆರೋಪದಲ್ಲಿ ಸಿಲುಕಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರ ಸಂಬಂಧಿಕರು ಸ್ವಲ್ಪ ನಿರಾಳರಾಗುವಂಥ ಆದೇಶವೊಂದನ್ನು ದೆಹಲಿ ಹೈಕೋರ್ಟ್‌ ನೀಡಿದೆ.


ಅದೇನೆಂದರೆ, ಕರೊನಾ ವೈರಸ್‌ ಇರುವ ಹಿನ್ನೆಲೆಯಲ್ಲಿ, ಇವರೆಲ್ಲರ ಹೇಳಿಕೆಗಳನ್ನು ವಿಡಿಯೋ ಕಾನ್ಫರೆನ್ಸ್‌ ಮೂಲಕ ಪಡೆದುಕೊಳ್ಳುವಂತೆ ಹೈಕೋರ್ಟ್‌ ಜಾರಿ ನಿರ್ದೇಶನಾಲಯಕ್ಕೆ ಆದೇಶಿಸಿದೆ.


ಅಕ್ರಮ ಆಸ್ತಿ ಗಳಿಕೆಗೆ ಸಂಬಂಧಿಸಿದಂತೆ ಡಿ.ಕೆ. ಶಿವಕುಮಾರ್ ಅವರ ಸಂಬಂಧಿಕರಿಗೆ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ನೋಟಿಸ್‌ ಜಾರಿ ಮಾಡಿದ್ದಾರೆ. ಸಾಕ್ಷಿಗಳಾಗಿ ವಿಚಾರಣೆಗೆ ಹಾಜರಾಗಬೇಕೆಂದು ನೋಟಿಸ್‌ನಲ್ಲಿ ತಿಳಿಸಲಾಗಿದೆ.


Comments