ತೀವ್ರ ಕುತೂಹಲ ಕೆರಳಿಸಿರುವ ಬಸವಕಲ್ಯಾಣ ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಪಕ್ಷದ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರನ್ನು ಕಣಕ್ಕಿಳಿಸಲು ಬಿಜೆಪಿ ಚಿಂತನೆ ನಡೆಸಿದೆ ಎನ್ನಲಾಗಿದೆ.
ಬಸವಕಲ್ಯಾಣ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದ ಕಾಂಗ್ರೆಸ್ ಶಾಸಕ ಬಿ. ನಾರಾಯಣ ರಾವ್ ಅವರ ನಿಧನದಿಂದ ತೆರವಾದ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದ್ದು, ಈ ಉಪಚುನಾವಣೆಗೆ ಬಿಜೆಪಿ ಬಿ.ವೈ ವಿಜಯೇಂದ್ರ ಅವರಿಗೆ ಟಿಕೆಟ್ ನೀಡಲು ಪಕ್ಷದ ಪ್ರಮುಖ ನಾಯಕರು ಚರ್ಚೆ ನಡೆಸಿದ್ದಾರೆ ಎನ್ನಲಾಗಿದೆ.
ಈಗಾಗಲೇ ಕಾಂಗ್ರೆಸ್ ನಿಂದ ನಾರಾಯಣರಾವ್ ಪತ್ನಿ ಮಲ್ಲಮ್ಮಗೆ ಕಾಂಗ್ರೆಸ್ ಟಿಕೆಟ್ ಘೋಷಣೆಯಾಗಿದ್ದು, ಬಿ.ವೈ ವಿಜಯೇಂದ್ರ ಅವರಿಗೆ ಬಸವಕಲ್ಯಾಣ ಕ್ಷೇತ್ರದಿಂದ ಟಿಕೆಟ್ ನೀಡಿದರೆ ಗೆಲುವಿಗೆ ಅನುಕೂಲವಾಗಲಿದೆ ಎಂದು ಬಿಜೆಪಿ ನಾಯಕರು ಅಭಿಪ್ರಾಯಪಟ್ಟಿದ್ದು, ವಿಜಯೇಂದ್ರಗೆ ಟಿಕೆಟ್ ಸಿಗುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
Comments
Post a Comment